ಹೊನ್ನಾವರ : ಕೆರೆಮನೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ವತಿಯಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಜನವರಿ 27 ರಿಂದ 31 ರವರೆಗೆ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿದೆ.
ಕೆರೆಮನೆ ಶಿವರಾಮ ಹೆಗಡೆಯವರ ಹೆಸರಿನಲ್ಲಿ ಸ್ಥಾಪಿತವಾದ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಯಕ್ಷಗಾನ ಮೇಳಗಳ ಇತಿಹಾಸದಲ್ಲಿ ಅತ್ಯಂತ ಹಳೆಯ ಮತ್ತು ದೀರ್ಘವಧಿ ಮೇಳವಾದ ಶ್ರೀ ದುರ್ಗಾಂಬಾ ಪ್ರಸಾದಿತ ಯಕ್ಷಗಾನ ಮಂಡಳಿ ಹಾಸ್ಯಗಾರ ಕರ್ಕಿ ಮೇಳಕ್ಕೆ ನೀಡಲು ಮಂಡಳಿ ನಿರ್ಧರಿಸಿದೆ. 2004 ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿ ಕಲೆ,ಸಂಸ್ಕøತಿ,ಸಾಹಿತ್ಯ ಹೀಗೆ ಸಕಲ ಕಲಾಕ್ಷೇತ್ರಕ್ಕೆ ವಿಸ್ತಾರಗೊಂಡಿದೆ. ಈ ಪ್ರಶಸ್ತಿ 25 ಸಾವಿರ ರೂ. ಮೊತ್ತ ಪ್ರಶಸ್ತಿ ಪತ್ರ, ಗೌರವಗಳನ್ನು ಒಳಗೊಂಡಿದೆ.ಜನವರಿ 27 ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಯಕ್ಷಗಾನದ ಸಮರ್ಥ ಕಲಾವಿದ ಕೆರೆಮನೆ ಗಜಾನನ ಹೆಗಡೆ ಹೆಸರಿನಲ್ಲಿ ಸ್ಥಾಪಿತವಾದ ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ ಪ್ರಸಿದ್ಧ ಯಕ್ಷಗಾನದ ಕಲಾವಿದರಾದ ಗೋಡೆ ನಾರಾಯಣ ಹೆಗಡೆ ಇವರಿಗೆ ಘೋಷಿಸಲಾಗಿದೆ. ಕಳೆದ 5 ವರುಷದಿಂದ ಯಕ್ಷಗಾನ ಕ್ಷೇತ್ರಕ್ಕೆ ಮೀಸಲಾದ ಈ ಪ್ರಶಸ್ತಿಯು 15 ಸಾವಿರ ರೂ, ನಗದು , ಪ್ರಶಸ್ತಿ ಪತ್ರ, ಗೌರವಗಳನ್ನು ಹೊಂದಿದೆ. ಜನವರಿ 31 ಈ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ.
Hiriya Paramayya Hasyagar – Civilian Attire

Leave a Comment