• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು

November 29, 2017 by Gaju Gokarna Leave a Comment

ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ನುಡಿದರು.ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ನುಡಿದರು. ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ವಲಯ ಮಟ್ಟದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಒಕ್ಕೂಟಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಂಕಷ್ಟದಲ್ಲಿರುವವರಿಗೆ ಸಹಾಯಹಸ್ತ ಚಾಚುವ ಈ ಯೋಜನೆಯು ದೇಶದ ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿದೆ. ನಿರುದ್ಯೋಗಿಗಳಿಗೆ ಆಧಾರವಾಗಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಸಂಕಷ್ಟದಲ್ಲಿರುವ ವ್ಯಕ್ತಿಗೆ ಸಹಾಯ ಹಸ್ತ ಮಾಡಿ, ಬಡವರ ಪಾಲಿನ ದೀವಿಗೆಯಾಗಿ ಬೆಳಕು ನೀಡುವ ಯೋಜನೆಯಾಗಿದೆ. ಮನುಷ್ಯನಿಗೆ ಉತ್ತಮ ಸಂಸ್ಕಾರ ಪಡೆಯುವಲ್ಲಿ ಮಹತ್ತರ ಸಂಘಟನೆಯಾಗಿ ಬೆಳೆದಿದೆ. ಮನುಷ್ಯ ಸಂಘ ಜೀವಿ, ಯಾವುದೇ ಆಧಾರವಿಲ್ಲದೆ ನಿಮಗೆ ಧನ ಸಹಾಯ ಮಾಡಬಲ್ಲ ಏಕೈಕ ಯೋಜನೆ ಇದಾಗಿದೆ. ನಿರುದ್ಯೋಗಿಗಳಿಗೆ ಆಧಾರವಾಗಿ, ಶಿಕ್ಷಣಕ್ಕೆ ಉತ್ತೇಜನ ನೀಡುತ್ತದೆ. ಬೆಳಕು ಕಾಣದ ಗ್ರಾಮಕ್ಕೆ ಬೆಳಕು ನೀಡಿದೆ. ಸಂಸ್ಕಾರ ಇಲ್ಲದ ವ್ಯಕ್ತಿ ಸುಸಂಸ್ಕøತರಾಗಿದ್ದಾರೆ ಎಂದರು. ತಹಸೀಲ್ದಾರ ವಿ.ಆರ್.ಗೌಡ ಮಾತನಾಡಿ ಡಾ. ವಿರೇಂದ್ರ ಹೆಗ್ಗಡೆಯವರ ಸಮಾಜಮುಖಿ ಕಾರ್ಯ ಗ್ರಾಮೀಣ ಭಾಗದ ಜನರಿಗೆ ಬಾಳಿಗೆ ಬೆಳಕಾಗಿದೆ. ಅವರನ್ನು ನಾವು ಪ್ರತಿದಿನ ಸ್ಮರಿಸಬೇಕಾಗಿದೆ. ಎಲ್ಲ ಮಹಿಳೆಯರಿಗೆ ಆತ್ಮಾಭಿಮಾನ, ಧೈರ್ಯ ತುಂಬಿ ಸಮಾಜದಲ್ಲಿ ಗುರುತಿಸಿ ಉನ್ನತಿಗೊಳಸಲು ಸಹಾಯಕಾರಿಯಾಗಿದೆ ಎಂದರು. ಯೋಜನೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ ಎಂ. ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಈಗ ಸ್ವ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಜಿಲ್ಲೆಯಲ್ಲಿ 347 ಗುಂಪುಗಳನ್ನು ರಚನೆ ಮಾಡಿ ತಾಂತ್ರಿಕ ಕ್ಷೇತ್ರದ ತರಬೇತಿಯನ್ನು ನೀಡಲಾಗುತ್ತಿದೆ. ಇದು ಜನರು ಉದ್ಯೋಗದಲ್ಲಿ ತೊಡಗಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಶಿವರಾಜ ಮೇಸ್ತ, ಹಿರಿಯ ಪತ್ರಕರ್ತ ಜಿ.ಯು.ಭಟ್ ಮಾತನಾಡಿದರು. ಸ್ಥಳಿಯ ಜನಪ್ರತಿನಿಧಿಗಳಾದ ರಾಜಶ್ರೀ ಬಿ. ನಾಯ್ಕ, ದಿಲ್‍ಶಾದ ಬೇಗಂ ಇತರರು ಉಪಸ್ಥಿತರಿದ್ದರು. ಶ್ರೀ ಸತ್ಯನಾರಾಯಣ ಪೂಜಾ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಹೊನ್ನಾವರ ಎ ಮತ್ತು ಬಿ ಹಾಗೂ ಕಾಸರಕೋಡ 3 ವಿಭಾಗಗಳ 9 ಒಕ್ಕೂಟಗಳ ಪದಗ್ರಹಣ ನಡೆಯಿತು. ತಾಲೂಕಿನ ಪತ್ರಕರ್ತರನ್ನು ಸನ್ಮಾನಿಸಲಾಯಿತು.  ಯೋಜನಾಧಿಕಾರಿ ಎಂ.ಎಸ್.ಈಶ್ವರ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಮೇಲ್ವಿಚಾರಕಿ ಮಾಲಿನಿ ಧನ್ಯವಾದ ಸಮರ್ಪಿಸಿದರು. ಒಕ್ಕೂಟಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News Tagged With: ಉತ್ತಮ ಕಾರ್ಯ, ಏಕೈಕ ಯೋಜನೆ, ಕನಸಿನ ಕೂಸು, ಡಾ. ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ, ಮೂಡಗಣಪತಿ ಸಭಾಭವನ, ಯೋಜನೆಯು, ಶ್ರೀಕ್ಷೇತ್ರ ಬಂಗಾರಮಕ್ಕಿ, ಸಂಸ್ಕಾರ, ಸುಶಿಕ್ಷಿತ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,122 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar