ಹಳಿಯಾಳ:- ಇತ್ತೀಚೆಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಧೂಳೆಯÀಲ್ಲಿ ನಡೆದ ಪ್ರೌಢ ಶಾಲೆಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾ ಕೂಟದಲ್ಲಿ ಹಳಿಯಾಳದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಸ್ವಾಮಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ನಿಕಿತಾ ಢೇಪಿ 40 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗಳಿಸಿ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದಾಳೆಂದು ಶಿಕ್ಷಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ನಿಕಿತಾ ಗ್ರಾಮಾಂತರ ಭಾಗದ ವಿದ್ಯಾರ್ಥಿನಿಯಾಗಿದ್ದು ಕುಸ್ತಿ ಕ್ರೀಡೆಯಲ್ಲಿ ಮಿಂಚುತ್ತಿದ್ದು ರಾಷ್ಟ್ರಮಟ್ಟದಲ್ಲಿ ಸಾಧನೆಗೈಯುವ ಮೂಲಕ ಕರ್ನಾಟಕ ರಾಜ್ಯ, ಉತ್ತರ ಕನ್ನಡ ಜಿಲ್ಲೆ ಹಾಗೂ ಹಳಿಯಾಳ ತಾಲೂಕಿಗೆ ಕೀರ್ತಿಯನ್ನು ತಂದುಕೊಟ್ಟಿದ್ದಾಳೆಂದು ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ವ್ಹಿ.ಡಿ ಹೆಗಡೆ ತಿಳಿಸಿದ್ದು ವಿದ್ಯಾರ್ಥಿನಿಯ ಸಾಧನೆಗೆ ಅವರು ಹಾಗೂ ಸಂಸ್ಥೆಯ ನಿರ್ದೇಶಕ ಮಂಡಳಿ, ಕಾಲೇಜಿನ ಸಿಬ್ಬಂಧಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
Leave a Comment