ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು.
ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ತೆರಳಿ ಕ್ಷೌರ ಮಾಡಿಸಿಕೊಳ್ಳುವದಾಗಿ ಹೇಳಿದರು.
ಬರುವ ಚುನಾವಣೆ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೂ ಮಾಜಿ ಪ್ರಧಾನಿ ದೇವೆಗೌಡ ಹಾಗೂ ಕುಮಾರಸ್ವಾಮಿ ಆಗಮಿಸಿ ಪ್ರಚಾರ ಕೈಗೊಳ್ಳಲಿದ್ದಾರೆ. ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗುತ್ತದೆ. ಜೆಡಿಎಸ್ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಈವರೆಗೂ ಬಗೆಹರಿಸಲಾಗದ ಕುಡಿಯುವ ನೀರು, ರಸ್ತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವದು ಎಂದು ಹೇಳಿದರು. ಜೆಡಿಎಸ್ ಮುಖಂಡರಾದ ಪ್ರದೀಪ ಶೇಜವಾಡಕರ್, ಖಲಿಲುಲ್ಲಾ ಶೇಖ್, ಶಂಕರ್ ಇದ್ದರು.
Leave a Comment