ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿ 2017-18ನೇ ಸಾಲಿನ ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆಯಾ ತಾಲ್ಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿದ್ದು, ಮುಸ್ಲಿಂ, ಕ್ರಿಶ್ಚಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಧರ್ಮಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ 15 ಕೊನೆಯ ದಿನವಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಳೇ ಜಿಲ್ಲಾಧಿಕಾರಿ ಕಚೇರಿ ಆವರಣ, ಎಮ್.ಜಿ. ರಸ್ತೆ ಕಾರವಾರ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220336 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment