ಕಾರವಾರ:
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ವಾಯು ಸೇನೆಗೆ ಸೇರ ಬಯಸುವ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾರ್ಗದರ್ಶನ ಮತ್ತು ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ www.backwardclassess.kar.nic.in ನೋಡಬಹುದು. ಅಥವಾ ದೂರವಾಣಿ ಸಂಖ್ಯೆ 08382-226588 ಸಂಪರ್ಕಿಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment