• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಡತೊಕ, ಹೊಸ್ತೋಟ ಯಕ್ಷಗಾನ ಪ್ರಸಂಗಗಳು ಶೈಕ್ಷಣಿಕ ಪಠ್ಯದಲ್ಲಿ ಅಳವಡಿಕೆಯಾಗಲಿ : ಅರವಿಂದ ಕರ್ಕಿಕೋಡಿ

December 26, 2017 by Sachin Hegde Leave a Comment

ಹೊನ್ನಾವರ: ಕಡತೋಕ ಮಂಜುನಾಥ ಬಾಗವತ ಮತ್ತು ಹೊಸ್ತೋಟ ಮಂಜುನಾಥ ಭಾಗವತ ಅವರು ರಚಿಸಿದ ಯಕ್ಷಗಾನ ಪ್ರಸಂಗಗಳು ಸಮಗ್ರ ಅಧ್ಯಯನವಾಗದೇ ಅವಗಣನೆ ಆಗುತ್ತಿದೆ. ರಾಜ್ಯದ ಶೈಕ್ಷಣಿಕ ಪಠ್ಯದಲ್ಲಿ ಇವರ ಪ್ರಸಂಗಗಳನ್ನು ಅಳವಡಿಸಿದರೆ ವಿದ್ಯಾರ್ಥಿಗಳಿಗೆ ಯಕ್ಷಗಾನದ ಬಗ್ಗೆ ಸ್ಪಷ್ಟತೆ ಮೂಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಚಿಂತಕರೆಲ್ಲ ಸೇರಿ ಸರಕಾರದ ಮೇಲೆ ಒತ್ತಡ ಹೇರಬೇಕಾದ ತುರ್ತು ಇದೆ ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರು ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಹಳದೀಪುರದಲ್ಲಿ ಹಿರಿಯ ಭಾಗವತ, ಪ್ರಸಂಗಕರ್ತ ದಿ. ಕಡತೋಕ ಮಂಜುನಾಥ ಭಾಗವತ ಅವರ ನೆನಪಿನಲ್ಲಿ ಹಮ್ಮಿಕೊಂಡ ಐದನೇ ವರ್ಷದ ಯಕ್ಷರಂಗೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಲಾಗಾಯ್ತಿನಿಂದ ಕನ್ನಡವನ್ನು ಸಶಕ್ತವಾಗಿ ದುಡಿಸಿಕೊಂಡ ಯಕ್ಷಗಾನ ಪ್ರಸಂಗ ಸಾಹಿತ್ಯ ಅಳಿಯುತ್ತದೆ ಎಂದು ಆತಂಕಪಡಬೇಕಾಗಿಲ್ಲ. ಹಾಗಂದ ಮಾತ್ರಕ್ಕೆ ನಾವು ಯಕ್ಷಗಾನವನ್ನು ಗಂಭೀರವಾಗಿ ಒಳಗೊಳಿಸಿಕೊಳ್ಳದಿದ್ದರೆ ನಾಮ್ಮೊಳಗಿನ ಯಕ್ಷಗಾನದ ಕಸು ಅಳಿಯುತ್ತದೆ. ಹಾಗಾಗಿ ಇದರ ಬಗ್ಗೆ ಚಿಂತಿಸಬೇಕಾದದ್ದು ಎಲ್ಲರ ಜವಾಬ್ದಾರಿ ಎಂದು ಅರವಿಂದ ಕರ್ಕಿಕೋಡಿ ನುಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಯಕ್ಷರಂಗ ಮಾಸಪತ್ರಿಕೆ ಸಂಪಾದಕ ಕಡತೋಕ ಗೋಪಾಲಕೃಷ್ಣ ಭಾಗವತ ಯಕ್ಷಗಾನ ಕ್ಷೇತ್ರಕ್ಕೆ ಪ್ರಯೋಜನವಾಗುವಂತಹ ಕೆಲಸಗಳನ್ನು ಪ್ರತಿ ವರ್ಷವೂ ಮಾಡುವ ಉದ್ದೇಶದಿಂದ ಈ ಯಕ್ಷರಂಗೋತ್ಸವವನ್ನು ಪ್ರತಿವರ್ಷವೂ ಮಾಡಿಕೊಂಡು ಬರುತ್ತಿದ್ದೇವೆ. ಇಲ್ಲಿ ಮಕ್ಕಳ ಯಕ್ಷಗಾನ, ಮಹಿಳೆಯರ ಯಕ್ಷಗಾನ, ತಾಳಮದ್ದಳೆ ಈ ಎಲ್ಲ ಪ್ರಕಾರಗಳಿಗೆ ಅವಕಾಶ ಮಾಡಿಕೊಡುವ ಉದ್ದೇಶ ಮಾತ್ರವಲ್ಲ, ಯಕ್ಷಗಾನದ ಸಾಂಪ್ರದಾಯಿಕ ಸತ್ವ ಅಳಿದು ಹೋಗುತ್ತಿರುವ ಈ ಕಾಲಘಟ್ಟದಲ್ಲಿ ಭಾರತೀಯ ಸಂಗೀತದಲ್ಲಿ ವಿಶಿಷ್ಟವಾದ ಯಕ್ಷಗಾನ ಸಂಗೀತದ ಸ್ವರೂಪ ಮತ್ತು ಅದರ ಅನನ್ಯತೆಯನ್ನು ದಾಖಲಿಸುವ ಕೆಲಸಗಳನ್ನು ಮಾಡುತ್ತಿದ್ದೇವೆ ಎಂದರು.
ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷ ಗಣೇಶ ಪೈ, ಉದ್ಯಮಿ ದಾಮೋದರ ಜಿ. ನಾಯ್ಕ ವಿರೂಪಾಕ್ಷ ಹೆಗಡೆ ಶೀಗೇಹಳ್ಳಿ ಆಗಮಿಸಿ ಶುಭ ಹಾರೈಸಿದರು.
ಲೀಲಾ ಗಣಪತಿ ಟ್ರಸ್ಟ್ ಅಧ್ಯಕ್ಷ ಡಾ. ಜಿ.ಜಿ. ಸಬಾಹಿತ್ ಅಧ್ಯಕ್ಷತೆ ವಹಿಸಿದ್ದರು.
ಎಂ.ಎಂ.ಭಟ್ಟ ಕಾರ್ಯಕ್ರಮ ನಿರ್ವಹಿಸಿದರು.

watermarked Yaksharangotsava Photo 2

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News Tagged With: ಅರವಿಂದ ಕರ್ಕಿಕೋಡಿ, ಅಳವಡಿಕೆಯಾಗಲಿ, ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಡತೊಕ, ಕಡತೋಕ ಮಂಜುನಾಥ ಬಾಗವತ, ಪ್ರಸಂಗಗಳು, ಶೈಕ್ಷಣಿಕ ಪಠ್ಯ, ಹೊಸ್ತೋಟ ಯಕ್ಷಗಾನ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,120 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...