• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಾರ್ಷಿಕ ಸ್ನೇಹ ಸಮ್ಮೇಳನಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ವೇದಿಕೆ

February 5, 2018 by Sachin Hegde Leave a Comment

ಜಿಲ್ಲಾ ಪಂಚಾಯತ ಉ.ಕ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕುಮಟಾ ಮತ್ತು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಇವರ ಆಶ್ರಯದಲ್ಲಿ ಗೋಕರ್ಣದ ಸಾಣೆಕಟ್ಟೆಯ ಸರಕಾರಿ ಹಿರಿಯ ಪಾಥಮಿಕ ಶಾಲೆಯ ವಾರ್ಷಿಕೋತ್ಸವವನ್ನು 02/02/18 ರಂದು ಹೆರವಟ್ಟಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಶ್ರೀಮತಿ ಶಾರದಾ ಶೆಟ್ಟಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಖಾಸಗಿ ಶಾಲೆಗಳಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಸರಕಾರಿ ಶಾಲೆಗಳಿಗೂ ನೀಡಲಾಗುತ್ತಿದೆ. ಶಾಲೆಗಳಲ್ಲಿ ನಡೆಯುವ ಇಂತಹ ವಾರ್ಷಿಕೋತ್ಸವಗಳು ಮಕ್ಕಳಿಗೆ ಮನರಂಜನೆ ನೀಡುವುದರೊಂದಿಗೆ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಯಾಗಿದೆ ಎಂದರು.
ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಪ್ರಸ್ತುತ ದಿನಗಳಲ್ಲಿ ಶಿಕ್ಷಣ ತೀರಾ ಅಗತ್ಯವಾಗಿದೆ. ಸರಕಾರಿ ಶಾಲೆಗಳಲ್ಲಿ ಎಲ್ಲಾ ಸೌಲಭ್ಯಗಳಿದ್ದರೂ ಪಾಲಕರ ಇಂಗ್ಲಿಷ್ ಮೋಹದಿಂದಾಗಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಲ್ಲದೇ ಮುಚ್ಚುವ ಸ್ಥಿತಿ ಎದುರಾಗಿದೆ. ಸರಕಾರಿ ಶಾಲೆಗಳಲ್ಲೂ ಉತ್ತಮ ಶೈಕ್ಷಣಿಕ ಅರ್ಹತೆಯುಳ್ಳ ಶಿಕ್ಷಕರಿದ್ದು ಉತ್ತಮ ಶಿಕ್ಷಣವನ್ನು ಪಡೆಯಬಹುದಾಗಿದೆ. ಪುಸ್ತಕಗಳು ಮನುಷ್ಯನ ಅತ್ಯುತ್ತಮ ಸ್ನೇಹಿತ. ಹಾಗಾಗಿ ಪ್ರತಿಯೊಬ್ಬರೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದು ನಮಗೆ ಜ್ಞಾನದ ಜೊತೆಗೆ ನಮ್ಮ ಏಕಾಂಗಿತನವನ್ನು ಹೋಗಲಾಡಿಸುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಪುಸ್ತಕಾಭಿಮಾನ, ಕನ್ನಡಾಭಿಮಾನ, ಸಾಹಿತ್ಯಾಭಿಮಾನ ಮತ್ತು ದೇಶಾಭಿಮಾನವನ್ನು ಮೂಡಿಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕು. ಅಲ್ಲದೇ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕು ಹಾಗೂ ಅವರ ಮೇಲೆ ಒತ್ತಡ ಹೇರದೇ ಅವರ ಆಯ್ಕೆಗೆ ಮಾನ್ಯತೆ ನೀಡಬೇಕು ಎಂದು ಪಾಲಕರಿಗೆ ಕರೆ ನೀಡಿದರು. ಶಾಲೆಗಳಲ್ಲಿ ನಡೆಯುವ ಇಂತಹ ವಾರ್ಷಿಕ ಸ್ನೇಹ ಸಮ್ಮೇಳನಗಳಿಂದ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಸಾಧ್ಯ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಕರ್ಣ ಗ್ರಾಮ ಪಂಚಾಯತದ ಉಪಾಧ್ಯಕ್ಷರಾದ ಶೇಖರ ಜಿ. ನಾಯ್ಕ ಅವರು ವಹಿಸಿದ್ದರು.
ಈ ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಗಾಯತ್ರಿ ಗೌಡ, ತಾ.ಪಂ. ಸದಸ್ಯ ಮಹೇಶ ಶೆಟ್ಟಿ, ಗೋಕರ್ಣ ಗ್ರಾ.ಪಂ. ಸದಸ್ಯೆ ವಿಜಯಾ ಮಹೇಶ ನಾಯಕ, ಅನಿಲ ನಾಡಕರ್ಣಿ, ದತ್ತಾ ಎಚ್. ನಾಯ್ಕ, ಶಾಂತಾರಾಮ ಎಚ್. ನಾಯಕ, ಗೋವಿಂದ ಎಂ. ನಾಯ್ಕ, ಓಮು ಟಿ. ನಾಯ್ಕ, ಮುಂತಾದ ಗಣ್ಯರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Kumta News Tagged With: ಇಂಗ್ಲಿಷ್ ಮೋಹ, ಉತ್ತಮ ಶೈಕ್ಷಣಿಕ ಅರ್ಹತೆ, ಕುಮಟಾ ಮತ್ತು ಶಾಲಾಭಿವೃದ್ಧಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಗೋಕರ್ಣದ ಸಾಣೆಕಟ್ಟೆ, ಜ್ಞಾನದ ಜೊತೆ, ನಾಗರಾಜ ನಾಯಕ ತೊರ್ಕೆ, ಮಕ್ಕಳಲ್ಲಿರುವ ಸುಪ್ತ ಪ್ರತಿಭೆ, ವಾರ್ಷಿಕ ಸ್ನೇಹ ಸಮ್ಮೇಳನ, ಹೊರತರುವ ವೇದಿಕೆ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,113 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar