• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೊನ್ನಾವರಕ್ಕೆ 128 ಕೋಟಿ ವೆಚ್ಚದಲ್ಲಿ ಕುಡಿಯವ ನೀರು

February 17, 2018 by Gaju Gokarna Leave a Comment

ಹೊನ್ನಾವರ :

ಕರ್ನಾಟಕ ಸರಕಾರ ಮಂಡಿಸಿದ ರಾಜ್ಯದ ಆಯ-ವ್ಯಯ ಪÀತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ಹೊನ್ನಾವರ ಪಟ್ಟಣಕ್ಕೆ 128 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಮಂಜೂರಾತಿ ನೀಡಿರುವುದನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಯೋಜನೆಯ ಕುರಿತು ಅವಿರತವಾಗಿ ಹೋರಾಡಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಮುಂಜೂರಾತಿ ದೊರಕಿಸಿಕೊಳ್ಳುವಲ್ಲಿ ಯಶಸ್ವಿಯಾದ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕಿ  ಶಾರದಾ ಶೆಟ್ಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ  ಆರ್. ವಿ. ದೇಶಪಾಂಡೆಯವರನ್ನು ಅವರು ತುಂಬ ಹೃದಯದಿಂದ ಅಭಿನಂದಿಸಿ, ಹೊನ್ನಾವರ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಅವರು ಇಂದು ಹಳದೀಪುರದ ಜೀವನ ಸಭಾಭವನದಲ್ಲಿ ಹಳದೀಪುರ ಪಂಚಾಯತ ಕಾಂಗ್ರೆಸ್ ಘಟಕ ಏರ್ಪಡಿಸಿದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಶಾಸಕಿ  ಶಾರದಾ ಎಂ. ಶೆಟ್ಟಿ ಓರ್ವ ಮಹಿಳೆಯಾಗಿ ಕಳೆದ ನಾಲ್ಕುವರೆ ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಯುವ ಮುಖಂಡ ಕೆ.ಪಿ.ಸಿ.ಸಿ. ಹಿಂದುಳಿದ ವರ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಶೆಟ್ಟಿ ಮಾತನಾಡಿ ಶಾಸಕಿ  ಶಾರದಾ ಎಂ. ಶೆಟ್ಟಿಯವರು ಅನನುಭವಿ ಅನ್ನುವ ವಿರೋಧಿಗಳ ಮಾತಿಗೆ ತಮ್ಮ ಕ್ರಿಯಾಶೀಲತೆ ಮತ್ತು ಕಾರ್ಯಕ್ಷಮತೆಯ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದರು. ಈಗಾಗಲೇ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂಪಾಯಿಗಳ ಅನುದಾನವನ್ನು ಸರಕಾರದ ಮಟ್ಟದಿಂದ ತಂದು ಕ್ಷೇತ್ರದ ಅಭಿವೃದ್ಧಿಗೆ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದರು.
ನ್ಯಾಯವಾದಿ ಜಿ. ಸಿ. ನಾಯ್ಕ ಮಾತನಾಡಿ ವಿರೋದಿಗಳ ಅಪಪ್ರಚಾರಕ್ಕೆ ತಕ್ಕ ಉತ್ತರ ನೀಡಲು ಕಾಂಗ್ರೆಸ್ ಕಾರ್ಯಕರ್ತರು ಸದಾ ಸಿದ್ದರಿರಬೇಕು ಎಂದರು. ಚುನಾವಣೆಗೆ ಸಮೀಪಿಸುತ್ತಿರುವುದರಿಂದ ವಿರೋಧ ಪಕ್ಷಗಳು ಸರಕಾರಕ್ಕೆ ಮತ್ತು ಶಾಸಕರಿಗೆ ಕೆಟ್ಟ ಹೆಸರು ತರುವಂತಹ ಕಾರ್ಯದಲ್ಲಿ ತೊಡಗಿರುವುದನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಾಮೋದರ ನಾಯ್ಕ ಮಾತನಾಡಿ ಈಗಾಗಲೇ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು “ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮದ ಅಡಿಯಲ್ಲಿ ಪ್ರತಿಯೊಂದು ಮನೆಗೆ ಭೇಟಿ ನೀಡಿ ಸರಕಾರದ ಸಾಧನೆಯನ್ನು ತಿಳಿಸಿರುತ್ತಾರೆ.  ಇನ್ನು ಎರಡನೇ ಹಂತದಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಹಿರಿಯರ ಸಭೆ ನಡೆಸಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಬೇಕು ಎಂದರು.
ಗ್ರಾಮ ಪಂಚಾಯತ ಸದಸ್ಯೆ  ನಾಗವೇಣಿ ಗೌಡ ಮಾತನಾಡಿ ನಮ್ಮ ನೆಚ್ಚಿನ ಶಾಸಕಿ ಒರ್ವ ಮಹಿಳೆಯಾಗಿ ಇಷ್ಟೊಂದು ಕ್ರಿಯಾಶೀಲರಾಗಿ, ಸಕ್ರಿಯವಾಗಿ ಕ್ಷೇತ್ರದ ಅಭಿವೃದ್ಧಿಗೆ ತೊಡಗಿಸಿಕೊಂಡಿರುವುದು ಕ್ಷೇತ್ರದ ಎಲ್ಲಾ ಮಹಿಳೆಯರಿಗೆ ಹೆಮ್ಮೆಯ ವಿಷಯ ಎಂದರು. ಪಕ್ಷದ ಕಾರ್ಯಕರ್ತ ಮೋಹನ ಆಚಾರಿ ಮಾತನಾಡಿ ಪುನಃ ಎರಡನೇ ಬಾರಿ ಶಾರದಾ ಶೆಟ್ಟಿಯವರನ್ನ ವಿಧಾನಸಭೆಗೆ ಆಯ್ಕೆ ಮಾಡಿ ಕಳುಹಿಸುವ ಕುರಿತು ಇಂದಿನಿಂದಲೇ ಸಕ್ರಿಯರಾಗೋಣ ಎಂದರು.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿನಾಯಕ ಎಸ್. ಶೇಟ್ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಳದೀಪುರ ಘಟಕದ ಅಧ್ಯಕ್ಷ ರಾಜೇಶ್ ನಾಯ್ಕ ವಂದಿಸಿದರು.

watermarked 1 2

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News Tagged With: ಕುಡಿಯವ ನೀರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ವಿಧಾನಸಭಾ ಕ್ಷೇತ್ರದ ಶಾಸಕಿ  ಶಾರದಾ ಶೆಟ್ಟಿ, ವೆಚ್ಚದಲ್ಲಿ, ಹೊನ್ನಾವರಕ್ಕೆ 128 ಕೋಟಿ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...