• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

March 3, 2018 by Gaju Gokarna Leave a Comment

ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು.ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಂ.ಪಿ.ಇ. ಸೊಸೈಟಿಯ ಉಪಾಧ್ಯಕ್ಷರಾದ  ಕೃಷ್ಣಮೂರ್ತಿ ಭಟ್ಟ ಮಾತನಾಡಿ ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಮತ್ತು ಪರಿಸರ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದರ ಮೂಲಕ ತಮ್ಮ ವ್ಯಕ್ತತ್ವವನ್ನು ವಿಕಾಸಗೊಳಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.  ಅತಿಥಿಗಳಾಗಿ ಆಗಮಿಸಿದ್ದ ಪ್ರೊ. ಎಂ. ಎಚ್. ಭಟ್ಟ ಮತ್ತು ಪ್ರೊ. ವಿ. ಎಸ್. ಭಟ್ಟ ಇವರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಉಪಸ್ಥಿತರಿದ್ದ ಕಿಸಾನ ಸಂಘದ ಅಧ್ಯಕ್ಷರು ಮತ್ತು ಊರಿನ ಹಿರಿಯರಾದ  ಶಂಭು ಭಟ್ಟರವರು ವಿದ್ಯಾರ್ಥಿಗಳ ಕಾರ್ಯವನ್ನು ಕೊಂಡಾಡಿದರು. ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್. ಎಸ್. ಹೆಗಡೆಯವರು ವಿದ್ಯಾರ್ಥಿಗಳ ಕಾರ್ಯವನ್ನು ಪ್ರಶಂಸಿಸಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಪ್ರೊ. ಜಿ. ಎಸ್. ಹೆಗಡೆ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ಥಾವಿಕ ಮಾತುಗಳನ್ನಾಡಿದರು. ಸಹ ಶಿಬಿರಾಧಿಕಾರಿಯಾದ ಪ್ರೊ. ಪ್ರಶಾಂತ ಹೆಗಡೆ ವಂದಿಸಿದರು.   ಏಳು ದಿನದ ಈ ಶಿಬಿರದಲ್ಲಿ ವಿವಿಧ ಕಡೆ ಸ್ವಚ್ಛತಾ ಕಾರ್ಯವನ್ನು ಕೈಗೊಂಡಿದ್ದಲ್ಲದೇ ಮತದಾನದ ಜಾಗೃತಿ ಜಾಥಾ ಕೈಗೊಂಡು ಮನೆಮನೆಗೆ ತೆರಳಿ ಮತದಾನ ಮತ್ತು ಶೌಚಾಲಯದ ಬಳಕೆಯ ಕುರಿತು ಜಾಗೃತಿ ಮೂಡಿಸಲಾಯಿತು. ಮುಖ್ಯವಾಗಿ ಊರಿನ ಪ್ರಮುಖ ದೇವಾಲಯವಾದ ಉಮಾಮಹೇಶ್ವರ ದೇವಾಲಯದ ಸುತ್ತಮುತ್ತ ಸ್ವಚ್ಛಗೊಳಿಸಿದ್ದಲ್ಲದೇ ಗಿಡಗಂಟೆಗಳಿಂದ ಮತ್ತು ಪ್ಲಾಸ್ಟಿಕ್ ತ್ಯಾಜ್ಯಗಳಿಂದ ಆವರಿಸಿದ್ದ ದೇವಾಲಯದ ಪುಷ್ಕರಣಿಯನ್ನು ಸ್ವಚ್ಛಗೊಳಿಸಲಾಯಿತು. ಅಲ್ಲದೇ ಪ್ರತಿದಿನ ಮಧ್ಯಾಹ್ನ 4 ಗಂಟೆಯಿಂದ ವಿವಿಧ ವಿಷಯಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶಿಬಿರಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಮತ್ತು ಊರ ನಾಗರಿಕರಿಂದ ಪ್ರತಿದಿನ ಸಾಂಸ್ಕøತಿಕ ಕಾರ್ಯಕ್ರಮ  ನಡೆಯಿತು.

watermarked IMG 20180217 WA0048

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Honavar News Tagged With: . ಎನ್.ಎಸ್.ಎಸ್. ಕಾರ್ಯಕ್ರ, ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಘಟಕದ, ವಾರ್ಷಿಕ ವಿಶೇಷ, ಶಿಬಿರ, ಸಂತೆಗುಳಿಯ ಸರಕಾರಿ ಹಿರಿಯ, ಸಮಾರೋಪ ಸಮಾರಂಭ, ಹೊನ್ನಾವರದ ಎನ್.ಎಸ್.ಎಸ್

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...