• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೃಷಿ ನೀರಾವರಿ ಪಂಪ್ ಸೆಟ್‍ಗಳ ಸಕ್ರಮಗೊಳಿಸಿರುವ ಕುರಿತು ರೈತರಿಗೆ ಪ್ರಮಾಣ ಪತ್ರ ವಿತರಣೆ

March 3, 2018 by Yogaraj SK Leave a Comment

ಹಳಿಯಾಳ:  ಅಧಿಕಾರಿಗಳು ಪ್ರಾಮಾಣಿಕವಾಗಿ ನಿಷ್ಠೆಯಿಂದ ಕರ್ತವ್ಯನಿರ್ವಹಿಸಿದರೇ ಮಾತ್ರ ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡು ಕ್ಷೇತ್ರದ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಆ ದೀಶೆಯಲ್ಲಿ ಹಳಿಯಾಳ ಹೆಸ್ಕಾಂ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದರು.  ಪಟ್ಟಣದ ಡಾ.ಬಾಬು ಜಗಜೀವನರಾವ್ ಸಭಾಭವನದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಹಳಿಯಾಳ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದಿಂದ ಏರ್ಪಡಿಸಿದ ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಕೃಷಿ ನೀರಾವರಿ ಪಂಪ್ ಸೆಟ್‍ಗಳನ್ನು ಸಕ್ರಮಗೊಳಿಸಿದ್ದರ ಕುರಿತ ತಾಲೂಕಿನ ರೈತರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.  ಕಾಂಗೈ ಸರ್ಕಾರದ ಅವಧಿಯಲ್ಲಿ 997 ಪಂಪಸೆಟ್‍ಗಳನ್ನು ಸಕ್ರಮಗೊಳಿಸಿದೆ. ರೈತರಿಂದ 1.30 ಕೋಟಿಯಷ್ಟು ಹಣ ತುಂಬಿಸಿಕೊಂಡು ಸರ್ಕಾರ 33.3 ಕೋಟಿ ಹಣ ಖರ್ಚು ಮಾಡಿ ಸುಮಾರು 651ಟಿಸಿಗಳನ್ನು ಅಳವಡಿಸಿ ವಿದ್ಯುತ್ ಸಮಸ್ಯೆಗೆ ಪರಿಹಾರ ಒದಗಿಸಿದೆ ಅದರಂತೆ ದಾಂಡೇಲಿಯ(ಜೋಯಿಡಾ) 122 ಪಂಪಸೆಟ್‍ಗಳನ್ನು ಸಕ್ರಮಗೊಳಿಸಿ ರೈತರಿಂದ 30ಲಕ್ಷ ಹಣ ಪಾವತಿಸಿಕೊಂಡು 2.25ಕೋಟಿ  ಹಣ ಸರ್ಕಾರ ಪಾವತಿಸಿ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ.   ಗ್ರಾಮಾಂತರ ಭಾಗಗಳಲ್ಲಿ ಹೊಸ ತಂತಿಗಳ ಜೋಡಣೆ ಕಂಬಗಳ ಬದಲಾವಣೆ ಹೀಗೆ ಹಲವಾರು ರೀತಿಯ ಯೋಜನೆಗಳನ್ನು ರೈತರಿಗೆ ನೀಡಿದ್ದು ಇದನ್ನು ರೈತರು ಮರೆಯಬಾರದು ಎಂದು ಹೇಳಿದರು.   ವಿಪ ಸದಸ್ಯ ಎಸ್ ಎಲ್ ಘೋಟ್ನೆಕರ ಮಾತನಾಡಿ ನರೇಂದ್ರ ಮೊದಿ ಅವರು ರೈತರ ವಿರೋಧಿ ಎಂದು ಟಿಕಿಸಿದರು.   ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರವಿಂದ್ರ ಮೆಟಗುಡ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ, ತಾ.ಪ ಅಧ್ಯಕ್ಷೆ ರೀಟಾ ಸಿದ್ದಿ ಉಪಾಧ್ಯಕ್ಷೆ ನಿಲವ್ವಾ ಮಡಿವಾಳ, ಜಿ.ಪಂ ಸದಸ್ಯರಾದ ಲಕ್ಷ್ಮಿ ಕೊರ್ವೆಕರ, ಕೃಷ್ಣಾ ಪಾಟೀಲ, ತಹಶೀಲ್ದಾರ ವಿದ್ಯಾಧರ ಗುಳುಗುಳಿ, ಇಓ ಲಕ್ಷ್ಮಣರಾವ್ ಯಕ್ಕುಂಡಿ, ದಾಂಡೇಲಿ ಪ್ರಭಾರಿ ಕಾರ್ಯನಿರ್ವಾಹಕ ಅಭಿಯಂತರ ಪುರುಶೋತ್ತಮ ಮಲ್ಯ. ಕೃಷಿ ಇಲಾಖೆಯ ಅಧಿಕಾರಿ ನಾಗೇಶ ನಾಯ್ಕ ಇದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News Tagged With: ಕೃಷಿ ನೀರಾವರಿ ಪಂಪ್ ಸೆಟ್‍, ತಾಲೂಕಿನ, ನರೇಂದ್ರ ಮೊದಿ, ರೈತರ ವಿರೋಧಿ, ರೈತರಿಗೆ ಪ್ರಮಾಣ ಪತ್ರ, ವಿತರಣೆ, ಸಕ್ರಮಗೊಳಿಸಿರುವ ಕುರಿತು, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar