ಹೊನ್ನಾವರ;
ವಿದ್ಯಾರ್ಥಿಗಳು ನೈತಿಕತೆಯನ್ನು ಬೇಳೆಸಿಕೊಳ್ಳಬೇಕು. ಮೊಬೈಲ್ ಮತ್ತು ಇಂಟರ್ನೆಟ್ನ್ನು ಪಠ್ಯಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಮಾದಕ ವಸ್ತುಗಳಿಗೆ ದಾಸರಾಗಬಾರದು ಎಂದು ತಾಲೂಕಾ ವೈದ್ಯಾಧಿಕಾರಿಗಳಾದ ಡಾ. ರಾಜೇಶ ಕಿಣಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದ ರೆಡ್ರಿಬ್ಬನ್ ಕ್ಲಬ್ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಉಪನ್ಯಾಸಕರಾಗಿ ಆಗಮಿಸಿದ ತಾಲೂಕಿನ ಆಪ್ತ ಸಮಾಲೋಚನಾಕಾರರಾದ ವಿನಾಯಕ ಪಟಗಾರ Àಮಾತನಾಡಿ ಎಚ್.ಐ.ವಿ. ಏಡ್ಸ್ ತಡೆಗಟ್ಟುವಲ್ಲಿ ಯುವಜನತೆಯ ಪಾತ್ರ ಎಂಬ ವಿಷಯದ ಬಗ್ಗೆ ಮಾತನಾಡುತ್ತ ಸಾಮಾಜಿಕ ಜಾಲತಾಣಗಳಿಂದ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದು, ಯುವಜನತೆ ಹೆಚ್ಚು ಹೆಚ್ಚು ಏಡ್ಸ್ಗೆ ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.
ಪ್ರಾಚಾರ್ಯರಾದ ಡಾ. ವಿಜಯಲಕ್ಷ್ಮಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್. ಅಧಿಕಾರಿಗಳಾದ ಪ್ರೊ. ಜಿ. ಎಸ್. ಹೆಗಡೆ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ಥಾವಿಕ ಮತುಗಳನ್ನಾಡಿದರು.
ಪ್ರೊ. ಪ್ರಶಾಂತ ಹೆಗಡೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಕುಮಾರಿ ಮಹಾದೇವಿ ಭಟ್ಟ ಪ್ರಾರ್ಥನಾ ಗೀತೆ ಹಾಡಿದರು.
Leave a Comment