• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಂಬೇಡ್ಕರ್ ತತ್ವ,ಆದರ್ಶಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ –ಕಾಂಗ್ರೇಸ್ ಮುಖಂಡ ರವಿಕುಮಾರ ಶೆಟ್ಟಿ

April 15, 2018 by Gaju Gokarna Leave a Comment

ಹೊನ್ನಾವರ : ಡಾ|| ಬಾಬಾ ಸಾಹೇಬ ಅಂಬೇಡ್ಕರ್‍ರವರು ಮಹಾನ್ ಮಾನವತಾವಾದಿಗಳಾಗಿದ್ದರು. ಅವರು ರಚಿಸಿದ ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು ಡಾ|| ಅಂಬೇಡ್ಕರ್‍ರವರ ತತ್ವ, ಆದರ್ಶ, ಚಿಂತನೆಗಳು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿ ನಿಂತಿದೆ ಎಂದು ಕೆ.ಪಿ.ಸಿ.ಸಿ ಹಿಂದುಳಿದ ವರ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು.
ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಏರ್ಪಡಿಸಿದ ಭಾರತ ರತ್ನ ವಿಜೇತ, ಸಂವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅಂಬೇಡ್ಕರ್ ಅವರ 127ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಮಾತನಾಡಿ ಭಾರತದಂತಹ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಾವಿರಾರು ಜಾತಿ, ಹತ್ತಾರು ಧರ್ಮಗಳು, ಅನೇಕ ಭಾಷೆಗಳ ನಡುವೆಯೂ ನಾವು ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಶಾಂತಿ ಮತ್ತು ಸ್ನೇಹದಿಂದ ಬದುಕುತ್ತಿದ್ದರೆ ಅದು ಡಾ|| ಬಾಬಾ ಸಾಹೇಬ ಅಂಬೇಡ್ಕರ್‍ರವರು ಭಾರತಕ್ಕೆ ನೀಡಿದ ಸಂವಿಧಾನದ ಮೂಲಕ ಎನ್ನುವುದಕ್ಕೆ ತುಂಬಾ ಹೆಮ್ಮೆ ಎನಿಸುತ್ತದೆ ಎಂದರು. ಇಂತಹ ಮಹಾನ್ ಚಿಂತಕನ ತತ್ವ, ಆದರ್ಶಗಳು ಈ ಜಗತ್ತಿನಲ್ಲಿ ಸೂರ್ಯ, ಚಂದ್ರನಿರುವವರೆಗೂ ಶಾಶ್ವತವಾಗಿರಲಿ ಎಂದು ಹಾರೈಸಿ ಅಂಬೇಡ್ಕರ್ ರಚಿಸಿದ ಸಂವಿಧಾನದ ಮೂಲ ಉದ್ದೇಶವನ್ನು ಇಂದಿನ ಯುವಕರು, ವಿದ್ಯಾರ್ಥಿಗಳು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸೇರಿದ ಪಕ್ಷದ ಎಲ್ಲಾ ಕಾರ್ಯಕರ್ತರು ಡಾ|| ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಭೆಯಲ್ಲಿ ರಾಜ್ಯ ಕಾಂಗ್ರೇಸ್ ಮೀನುಗಾರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅಜೀತ್ ತಾಂಡೇಲ್, ಕಾಂಗ್ರೇಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಆಗ್ನೇಲ್ ಡಯಾಸ್, ಯುವ ಕಾಂಗ್ರೇಸ್‍ನ ಗಯೂರ್ ಸಾಬ್, ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ, ಮಹಿಳಾ ಕಾಂಗ್ರೇಸ್‍ನ ಉಮಾ ಮೇಸ್ತ, ತುಳಸಿ ಗೌಡ, ಪಕ್ಷದ ಮುಖಂಡರಾದ ವಿನಾಯಕ್ ಶೇಟ್, ದಾಮೋದರ ನಾಯ್ಕ, ಬ್ರಾಝೀಲ್ ಪಿಂಟೋ, ಗಂಪಾ ಮೇಸ್ತ, ಮೋಹನ ಮೇಸ್ತ, ಸುರೇಶ ರುಕ್ಕು, ನೆಲ್ಸನ್ ರೋಡ್ರಿಗೀಸ್, ಪಟ್ಟಣ ಪಂಚಾಯತ್ ಸದಸ್ಯ ಸುರೇಶ ಮೇಸ್ತ, ಮಂಜುನಾಥ ಖಾರ್ವಿ, ಗಜು ನಾಯ್ಕ, ಶ್ರೀಕಾಂತ ಮೇಸ್ತ ಇನ್ನೂ ಮುಂತಾದ ಮುಖಂಡರು ಉಪಸ್ಥಿತರಿದ್ದರು.
ಹೊನ್ನಾವರ ತಾಲೂಕಾ ಕಾಂಗ್ರೇಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸೋಮಯ್ಯ ಮುಕ್ರಿ ಎಲ್ಲರನ್ನು ಸ್ವಾಗತಿಸಿದರು. ಸಮಿತಿಯ ಉಪಾಧ್ಯಕ್ಷ ಕೃಷ್ಣ ಹರಿಜನ ವಂದಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News Tagged With: ‘ಆದರ್ಶ’, ಅಂಬೇಡ್ಕರ್ ತತ್ವ, ಆದರ್ಶಗಳು, ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ, ಕಾಂಗ್ರೇಸ್ ಮುಖಂಡ, ಚಿಂತನೆಗಳು, ತತ್ವ, ದೇಶದ ಪ್ರಜಾಪ್ರಭುತ್ವ, ಪ್ರೀತಿ, ರವಿಕುಮಾರ ಶೆಟ್ಟಿ, ವಿಶ್ವಾಸ, ವ್ಯವಸ್ಥೆಗೆ ಭದ್ರ ಬುನಾದಿ, ಶಾಂತಿ ಮತ್ತು ಸ್ನೇಹ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar