ಹಳಿಯಾಳ ;
ಜೆಡಿಸ್ ಪಕ್ಷದ ಹಳಿಯಾಳ ಜೋಯಿಡಾ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಆರ್. ರಮೇಶ ಶುಕ್ರವಾರ ಪಟ್ಟಣದ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಅವರೊಂದಿಗೆ ಪತ್ನಿ ವೈದೇವಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಆರ್. ನಾಯ್ಕ, ಸಹೋದರ ಪ್ರದೀಪ್ ಕೆ.ಆರ್ ಮತ್ತು ಮುಖಂಡ ನಾಗೇಂದ್ರ ಜಿವೋಜಿ ಇದ್ದರು. ನಾಮಪತ್ರ ಸಲ್ಲಿಸಿದ ನಂತರ ಪಟ್ಟಣದಲ್ಲಿ ಕಾರ್ಯಕರ್ತರು ಹಾಗೂ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿದ ಇಲ್ಲಿಯ ಗ್ರಾಮದೇವಿ ಮೈದಾನದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ ಈ ಬಾರಿ ರಾಜ್ಯದಲ್ಲಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ಸರ್ಕಾರ ರಚಿಸಲಿದೆ ಹಾಗೂ ಕ್ಷೇತ್ರದಲ್ಲಿ ತಮ್ಮ ಗೆಲುವು ನಿಶ್ಚಿತ ಎಂದರು. ಈ ಬಾರಿ ಹಳಿಯಾಳ ಜೋಯಿಡಾ ಕ್ಷೇತ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ಪ್ರಚಾರಕ್ಕೆ ತೆರಳಿದ ಸ್ಥಳಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು.
Leave a Comment