ಹೊನ್ನಾವರ : ಬರುವ ಸೋಮವಾರ ದಿ: 23ರಂದು ಹೊನ್ನಾವರ- ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಶೆಟ್ಟಿಯವರು ಮರು ಆಯ್ಕೆ ಬಯಸಿ ಮುಂಬರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತಿಳಿಸಿದ್ದಾರೆ.
ಅಂದು ಮುಂಜಾನೆ 11 ಗಂಟೆಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಕುಮಟಾ ನಗರದ ಮಹಾಸತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ನಗರದ ನೆಲ್ಲಿಕೇರಿ, ಗುಡಗಾರ ಗಲ್ಲಿಯ ಮೂಲಕ ಸಕಾಯಕ ಆಯುಕ್ತರ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಕಾರಣ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಮತ್ತು ಅಭಿಮಾನಿಗಳು ಸ್ವಯಂ ಪ್ರೇರಿತರಾಗಿ ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
Leave a Comment