• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಂಗ್ರೇಸ್ ಜೆಡಿಎಸ್‌ ಅಪವಿತ್ರ ಮೈತ್ರಿ ಬಹಳ ದಿನ ಬಾಳಿಕೆ ಬರಲ್ಲ ‌- ಮಾಜಿ ಶಾಸಕ ಸುನೀಲ‌್ ಹೆಗಡೆ

May 24, 2018 by Yogaraj SK Leave a Comment

ಹಳಿಯಾಳ:-  ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೇಸ್ ಜೆಡಿಎಸ್ ಸರ್ಕಾರವು ಅಪವಿತ್ರ ಮೈತ್ರಿಯಾಗಿದ್ದು ಇದು ಬಹಳದಿನ ಬಾಳಿಕೆ ಬರದೆ ಮುಂದಿನ ಕೆಲವೇ ತಿಂಗಳುಗಳಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡು ಮತ್ತೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಗುರುವಾರ ಮುಂಜಾನೆ ಪಟ್ಟಣದಲ್ಲಿರುವ ಮಿನಿ ವಿಧಾನಸೌಧದ ಆವರಣದಲ್ಲಿ ರಾಜ್ಯ ಘಟಕದ ಕರೆ ಹಿನ್ನೆಲೆ ಜೆಡಿಎಸ್ ಕಾಂಗ್ರೇಸ್ ಮೈತ್ರಿ ಸರ್ಕಾರದ ರಚನೆಯನ್ನು ವಿರೋಧಿಸಿ ಕಪ್ಪು ಪಟ್ಟಿ ಧರಿಸುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸುವ ಮೂಲಕ ಕರಾಳ ದಿನವನ್ನಾಗಿ ಆಚರಿಸಿ ಮಾತನಾಡಿದ ಅವರು ಚುನಾವಣೆಯ ಸಮಯದಲ್ಲಿ ಶತ್ರುಗಳಾಗಿದ್ದವರು ಅಧಿಕಾರದ ಆಸೆಗಾಗಿ ಇಂದು ತಮ್ಮ ಎಲ್ಲಾ ತತ್ವ ಸಿದ್ದಾಂತಗಳನ್ನು ಗಾಳಿಗೆ ತೂರಿ ಮೈತ್ರಿ ಸರ್ಕಾರ ರಚನೆ ಮಾಡಿದ್ದನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಅವಲೋಕನ ನಡೆಸುತ್ತಿದೆ ಎಂದರು.  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ ಬಲಿಷ್ಠ ವಿರೋಧ ಪಕ್ಷದಲ್ಲಿ ಕುಳಿತು ಪ್ರಾಮಾಣಿಕವಾಗಿ ಹಾಗೂ ರಾಜ್ಯದ ಜನತೆಯ ಹಿತದೃಷ್ಠಿಯ ಪರವಾಗಿ ತನ್ನ ಕರ್ತವ್ಯವನ್ನು ನಿರ್ವಹಿಸಲಿದೆ ಮತ್ತೇ ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದು ಹೋರಾಟಗಾರ ಬಿಎಸ್ ಯಡ್ಯೂರಪ್ಪ ಮತ್ತೇ ರಾಜ್ಯದ ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಸಂದೇಹವೇ ಇಲ್ಲ ಎಂದು ಸಾರಿದರು.  ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ಮುಖಂಡರಾದ ವಿಎಮ್ ಪಾಟೀಲ್, ಅನಿಲ ಮುತ್ನಾಳ್, ವಿಲಾಸ ಯಡವಿ, ಎಸ್.ಎಶೆಟವಣ್ಣವರ, ತಾನಾಜಿ, ತುಕಾರಾಮ ಪಟ್ಟೇಕರ, ಅಪ್ಪು ಚರಂತಿಮಠ, ವಾಸು ಪೂಜಾರಿ, ಸಂತೋಷ ಘಟಕಾಂಬಳೆ, ವಿಜಯ ಬೋಬಾಟಿ, ಸಂತಾನ ಸಾವಂತ, ಸಿದ್ದು ಶೆಟ್ಟಿ, ರಾಕೇಶ, ಪ್ರದೀಪ ಹಿರೆಕರ, ನಾಗರಾಜ, ಅನಿಲ ಗಿರಿ, ರಾಘವೇಂದ್ರ ಚಲವಾದಿ ಮೊದಲಾದವರು ಇದ್ದರು.  

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Haliyal News, Trending Tagged With: Bjp pratibhatane, dina., karala, karala dina, ಅನಿಲ ಗಿರಿ, ಅನಿಲ ಮುತ್ನಾಳ್, ಅಪ್ಪು ಚರಂತಿಮಠ, ಎಸ್.ಎಶೆಟವಣ್ಣವರ, ಕಪ್ಪು ಪಟ್ಟಿ ಧರಿಸುವ ಮೂಲಕ, ಕಾಂಗ್ರೇಸ್ ಜೆಡಿಎಸ್‌ ಅಪವಿತ್ರ ಮೈತ್ರಿ, ತಾನಾಜಿ, ತುಕಾರಾಮ ಪಟ್ಟೇಕರ, ನಾಗರಾಜ, ಪ್ರದೀಪ ಹಿರೆಕರ, ಬಹಳ ದಿನ, ಬಾಳಿಕೆ ಬರಲ್ಲ, ಬಿಎಸ್ ಯಡ್ಯೂರಪ್ಪ ಮತ್ತೇ ರಾಜ್ಯದ ಮುಖ್ಯಮಂತ್ರಿ, ಮಾಜಿ ಶಾಸಕ ಸುನೀಲ್ ಹೆಗಡೆ, ರಾಕೇಶ, ರಾಘವೇಂದ್ರ, ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೇಸ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ, ವಾಸು ಪೂಜಾರಿ, ವಿಜಯ ಬೋಬಾಟಿ, ವಿಲಾಸ ಯಡವಿ, ಶಿವಾಜಿ ನರಸಾನಿ ಮುಖಂಡರಾದ ವಿಎಮ್ ಪಾಟೀಲ್, ಸಂತಾನ ಸಾವಂತ, ಸಂತೋಷ ಘಟಕಾಂಬಳೆ, ಸಿದ್ದು ಶೆಟ್ಟಿ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar