ಹಳಿಯಾಳ:- ನೂತನ ಅವಿಷ್ಕಾರದೊಂದಿಗೆ ಕೃಷಿಯಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದ ಅರ್ಹ ರೈತರಿಂದ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಳಿಯಾಳ ಸಹಾಯಕ ಕೃಷಿ ನಿರ್ದೇಶಕÀ ನಾಗೇಶ ನಾಯ್ಕ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ರೈತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ತಮ್ಮ ಸಾಧನೆಗಳ ಕುರಿತ ಎಲ್ಲಾ ದಾಖಲೆಗಳನ್ನು ಲಗತ್ತಿಸಿ ಜುಲೈ 20 ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರು, ಹಳಿಯಾಳ ರವರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೃಷಿ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಕೊರಿದ್ದಾರೆ.
Leave a Comment