ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಂದೆವಾಡಿ ಬಳಿ ಹರಿಯುವ ಪಾಂಡರಿ ನದಿ ಈ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೈದುಂಬಿ ಹರಿಯುತ್ತಿದ್ದು ಸೇತುವೆ ಸಂಪೂರ್ಣ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗೀತಗೊಂಡಿದೆ. ಅಲ್ಲದೇ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಈ ಸೇತುವೆ ಮುಳುಗಡೆಯಾಗಿದ್ದರಿಂದ 10ಕ್ಕೂ ಹೆಚ್ಚು ಹಳ್ಳಿಯ ಜನತೆ ಸುಮಾರು 40 ಕೀಮಿ ಸುತ್ತಿ ಜೋಯಿಡಾ, ದಾಂಡೆಲಿ, ರಾಮನಗರ ಪಟ್ಟಗಳಿಗೆ ತಲುಪಬೇಕಾದ ಪರಿಸ್ಥಿತಿ ಎದುರಾಗಿದ್ದು ರವಿವಾರ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ. ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಆದೇಶಿಸಿದರು.
Leave a Comment