• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ

July 30, 2018 by Yogaraj SK Leave a Comment

ಹಳಿಯಾಳ :- ಮಳೆ,ಗಾಳಿ, ಪ್ರಕೃತಿ ವಿಕೋಪದಿಂದ ಮನೆ,ಆಸ್ತಿಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ತ್ವರಿತವಾಗಿ ಕಾರ್ಯನಿರ್ವಹಿಸಿ ಅಂತಹವರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾ ಭವನದಲ್ಲಿ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯದಲ್ಲಿ ನಡೆದ 2018ರ ಸ್ವಚ್ಚ ಸರ್ವೇಕ್ಷಣ್ ಗ್ರಾಮೀಣ ತಾಲೂಕಾ ಮಟ್ಟದ ಕಾರ್ಯಾಗಾರವನ್ನು ಉಧ್ಘಾಟಿಸಿ ಅವರು ಮಾತನಾಡಿದರು.  ವಿದ್ಯಾರ್ಥಿಯಿಂದ ಹಿಡಿದು  ಪ್ರತಿಯೊಂದು ಹಂತದಲ್ಲಿರುವ ವ್ಯಕ್ತಿಯೂ ಸ್ವಚ್ಚತೆಗೆ ಆದ್ಯತೆ ನೀಡಬೇಕು, ತಮ್ಮ ಸುತ್ತಮುತ್ತಲ ಪರಿಸರ ಸ್ವಚ್ಚವಾಗಿಟ್ಟುಕೊಳ್ಳಬೇಕು.  ಎಲ್ಲಿಯಾದರೂ ನೈರ್ಮಲ್ಯ, ಅಸ್ವಚ್ಚ ಪರಿಸರ ಕಾಣಿಸಿದರೇ ಕೂಡಲೇ ಪುರಸಭೆ, ಗ್ರಾಮ ಪಂಚಾಯತಗಳಿಗೆ ದೂರು ನೀಡಿ ಪರಿಸರ ಸ್ವಚ್ಚ ಮತ್ತು ಸುಂದರವಾಗಿಡಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ಪ್ರತಿಯೊಬ್ಬರು ಶೌಚಾಲಯಗಳನ್ನು ಬಳಸುವಂತೆ ಕರೆ ನೀಡಿದರು.  ಪ್ರಕೃತಿ ವಿಕೋಪದಡಿ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಬಳಿ 5 ಕೋಟಿ ಹಣ ಮೀಸಲಾಗಿದೆ ಅಲ್ಲದೇ ಸರ್ಕಾರದ ಬಳಿ ಹಣದ ಕೊರತೆ ಇಲ್ಲ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಹಾಗೂ  ಮಾನವೀಯತೆಯಿಂದ ಕಾರ್ಯನಿರ್ವಹಿಸುವಂತೆ ಒತ್ತಿ ಹೇಳಿದರು.    ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆಯಾಗಿದ್ದು ಪ್ರಸ್ತುತ ಹಳಿಯಾಳ ಭಾಗದಲ್ಲಿ ಶೇ.26 ಮಳೆ ಕೊರತೆ ಇದೆ. ಆದರೇ ರೈತರು ಬೆಳೆದ ಭತ್ತ, ಕಬ್ಬು, ಮೆಕ್ಕೆಜೋಳ, ಹತ್ತಿ ಫಸಲು ಉತ್ತಮವಾಗಿದೆ ಎಂದ ದೇಶಪಾಂಡೆ ಜೋಯಿಡಾದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಮಾಹಿತಿ ನೀಡಿದರು.  ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ, ಜಿಪಂ ಉಪಾಧ್ಯಕ್ಷ ಸಂತೋಷ ರೆಣಕೆ, ಸದಸ್ಯರಾದ ಕೃಷ್ಣಾ ಪಾಟೀಲ್, ಮಹೇಶ್ರಿ ಮಿಶಾಳೆ, ತಾಪಂ ಅಧ್ಯಕ್ಷೆ ರೀಟಾ ಸಿದ್ದಿ, ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ, ತಹಶೀಲ್ದರ್ ವಿದ್ಯಾಧರ ಗುಳಗುಳಿ, ಕೃಷಿ ಅಧಿಕಾರಿ ನಾಗೇಶ ನಾಯ್ಕ, ಪುರಸಭೆ ಅಧಿಕಾರಿ ಕೇಶವ ಚೌಗಲೆ,ತಾಪಂ ಅಧಿಕಾರಿ ಜಕ್ಕಪ್ಪಗೊಳ ಇತರರು ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Trending Tagged With: 5 ಕೋಟಿ ಹಣ, ಅಧಿಕಾರಿಗಳು ಮಾನವೀಯತೆ, ಆಸ್ತಿಪಾಸ್ತಿ, ಕಾರ್ಯನಿರ್ವಹಿಸಿ, ಗಾಳಿ, ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣ, ದೃಷ್ಟಿಯಿಂದ, ಪ್ರಕೃತಿ ವಿಕೋಪದ ಪ್ರಕರಣ, ಪ್ರಕೃತಿ ವಿಕೋಪದಿಂದ ಮನೆ, ಮಳೆ, ಸಚಿವ ಆರ್.ವಿ.ದೇಶಪಾಂಡೆ, ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯ, ಸ್ವಚ್ಚ ಸರ್ವೇಕ್ಷಣ್ ಗ್ರಾಮೀಣ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar