ಹಳಿಯಾಳ:- ಭೂ ಮಾಲೀಕತ್ವವನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಖಾತ್ರಿಪಡಿಸುವ ‘ಭೂ ಮಾಲೀಕತ್ವ ಖಾತ್ರಿ ಯೋಜನೆ’ (ಲ್ಯಾಂಡ ಟೈಟ್ಲಿಂಗ್) ಯನ್ನು ರಾಜ್ಯದ 3 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಹಾಸನ ಜಿಲ್ಲೆಯ ಹಾಸನ ಮತ್ತು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಭೂ ಮಾಲೀಕತ್ವ ಖಾತ್ರಿ ಯೋಜನೆಯನ್ವಯ ಸರ್ವೇ ಮತ್ತು ಕಂದಾಯ ಇಲಾಖೆಯ ದಾಖಲೆಗಳನ್ನು ಹೋಲಿಸಿ, ಪರಿಶೀಲಿಸಲಾಗುವುದು. ಬಳಿಕ ಆರ್ಟಿಸಿಯನ್ನು ಅಪಡೆಟ್ ಮಾಡಿ ಇದನ್ನು ನ್ಯಾಯಾಲಯದಲ್ಲಿ ಪ್ರಶ್ನೀಸದಂತೆ ಕಾನೂನಿನ ಬೆಂಬಲವನ್ನು ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆಗೂ ಮುನ್ನ ಮಂಡಿಸಿದ 2018-19ನೇ ಸಾಲಿನ ಬಜೆಟ್ನಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವುದಾಗಿ ಘೋಷಿಸಿದ್ದರು ಎಂದು ತಿಳಿಸಿರುವ ಸಚಿವ ದೇಶಪಾಂಡೆಯವರು ಮುಂದಿನ ದಿನಗಳಲ್ಲಿ ಯೋಜನೆ ಬೆರೆ ತಾಲೂಕುಗಳಿಗೂ ವಿಸ್ತರಿಸಲಾಗುವುದು ಎಂದಿದ್ದಾರೆ.
Leave a Comment