ಹಳಿಯಾಳ:- ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆಯಲಿರುವ ಚುನಾವಣೆ ಕಣ ಹಳಿಯಾಳದಲ್ಲಿ ರಂಗೇರತೊಡಗಿದೆ, ವರಮಹಾಲಕ್ಷ್ಮೀ ಹಬ್ಬವಾದ ಶುಕ್ರವಾರದಿಂದ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷದಿಂದ 23 ವಾರ್ಡಗಳಿಗಾಗಿ ತಲಾ 23 ಅಭ್ಯರ್ಥಿಗಳು. ಜೆಡಿಎಸ್ ಪಕ್ಷ ಕೇವಲ 15 ಸೀಟುಗಳಿಗೆ ಸಿಮಿತವಾಗಿದ್ದರೇ, 9ಜನ ಪಕ್ಷೇತರ ಅಭ್ಯರ್ಥಿಗಳು ಹೀಗೆ 70 ಅಭ್ಯರ್ಥಿಗಳು ತಮ್ಮ ತಮ್ಮ ವಾರ್ಡಗಳಲ್ಲಿ ಪ್ರಚಾರ ಕಾರ್ಯ ಶುರುವಿಟ್ಟುಕೊಂಡಿದ್ದಾರೆ.
ಕಾಂಗ್ರೇಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಪಟ್ಟಣದಲ್ಲಿ ಸ್ಟಾರ್ ಪ್ರಚಾರಕರಾಗಿದ್ದರೇ, ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಮಾಜಿ ವಿಧಾನ ಪರಿಷತ್ ಸದಸ್ಯ ವಿಡಿ ಹೆಗಡೆ ಸ್ಟಾರ್ ಪ್ರಚಾರಕರಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಣೆಯಲ್ಲಿ ತೊಡಗಿದ್ದಾರೆ.
ಪುರಸಭೆ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ ನಡುವೆ ನೇರ ಸ್ಪರ್ದೆ ನಡೆಯುತ್ತಿದ್ದರೇ ಜೆಡಿಎಸ್ ಹಾಗೂ ಪಕ್ಷೇತರರು ಅಷ್ಟಕಷ್ಟೆ ಎನ್ನುವ ಮಾತು ಕೇಳಿಬರುತ್ತಿದೆ.
Leave a Comment