ಹೊನ್ನಾವರ ತಾಲೂಕಾ ಮಂಕಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವು ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ ಸಾರಥ್ಯದಲ್ಲಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಇಬ್ವರು ವಿದ್ಯಾರ್ಥಿಗಳು ಕ್ರೀಡಾಕೂಟ ಉದ್ಘಾಟಿಸುವುದರೊಂದಿಗೆ ತುಂಬಾ ಅರ್ಥಪೂರ್ಣವಾಗಿ ನಡೆಯಿತು.
ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕಚ್ರ ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಕುಮಾರಿ, ವಂದನಾ ಗೌಡ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಬೆಳ್ಳಿ ಪದಕ ಪಡೆದಿರುವ ಕುಮಾರ.ಮಹೇಂದ್ರ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯೂ ಎಜ್ಯುಕೇಶನ್ ಸೊಸೈಟಿಯ ಉಪಾಧ್ಯಕ್ಷರಾದ ಶ್ರೀ ಕಿರಣ ಬಿ ಪ್ರಭು ವಹಿಸಿದ್ದರು. ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಛೇರಿಯ ವಿಷಯ ಪರೀವಿಕ್ಷಕರಾದ ಶ್ರೀ ಟಿ.ಎಚ್.ನಾಯ್ಕ, ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಲಹೆ-ಸೂಚನೆ ನೀಡಿದರು. ಸರಕಾರಿ ಪ್ರೌಢಶಾಲೆಯ ಉಪಾಧ್ಯಕ್ಷ ಶ್ರೀ ಎಮ್.ಜಿ.ನಾಯ್ಕ, ಶಾರೀರಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಸಾಧನಾ ಬರ್ಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಹುರುದುಂಬಿಸಿದರು. ಮುಖ್ಯಾಧ್ಯಾಪಕರಾದ ಶ್ರೀ ವಿ.ಎಸ್.ಅವಧಾನಿ ಪ್ರಾರಂಭದಲ್ಲಿ ಎಲ್ಲರನ್ನೂ ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿದರು. ಶಾಲೆಯ ಶಿಕ್ಷಕರಾದ ಶ್ರೀ ಅಶೋಕ ನಾಯ್ಕ ವಂದಿಸಿದರು. ಶ್ರೀ ರಾಘವೇಂದ್ರ ಹೆಗಡೆ ನಿರೂಪಿಸಿದರು. ಹನ್ನೊಂದು ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿತೈಷಿಗಳು ಸಾಕ್ಷಿಯಾದರು. ಕ್ರೀಡಾಕೂಟದ ನಾಯಕತ್ವವನ್ನು ದೈಹಿಕ ಶಿಕ್ಷಕರಾದ ಶ್ರೀ ಎಲ್.ಎಚ್.ಚಂದಾವರಕರ ಮತ್ತು ಯಶ್ವಂತ ಮೇಸ್ತ ವಹಿಸಿದರು. ಕ್ರೀಡಾಕೂಟದಲ್ಲಿ ದಿನವಿಡಿ ವಿವಿಧ ಆಟೋಟಗಳು ನಡೆಯಿತು.
Leave a Comment