• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆಯಿತು ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ

August 30, 2018 by Vishwanath Shetty Leave a Comment

 

watermarked 1 1ಮಾರುತಿ ವಸತಿ ವಿದ್ಯಾಲಯ ಬಂಗಾರಮಕ್ಕಿ ಶಾಲೆಯಲ್ಲಿ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿಯನ್ನು ನಡೆಸಲಾಯಿತು. ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ದಿವ್ಯಸಾನಿಧ್ಯದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಶ್ರೀ ಮಾರುತಿ ಗುರೂಜಿಯವರು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ವೇದಿಕೆಯನ್ನು ಒದಗಿಸಿಕೊಡುತ್ತವೆ. ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಹಾಯಕಾರಿಯಾಗುತ್ತದೆ. ನಮ್ಮ ಈ ಸುಂದರವಾದ ಪರಿಸರವಿರುವ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದು ತುಂಬಾ ಸಂತಸ ತಂದಿದೆ. ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಹಾರೈಸಿದರು.
ಸಭೆಯನ್ನುದ್ದೇಶಿಸಿ ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದ ಅನ್ನಪೂರ್ಣ ಶಾಸ್ತ್ರಿ ರವರು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಸ್ಪರ್ಧೇಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಯಬೇಕು. ಮಕ್ಕಳ ಇಂತಹ ಪ್ರತಿಭಾ ಕಾರಂಜಿಯನ್ನು ನೋಡುವುದೇ ಒಂದು ರೀತಿಯ ಹಬ್ಬ. ಸ್ಪರ್ಧೆಯಲ್ಲಿ ಸೋಲು-ಗೆಲುವು ಸಹಜ. ಅದು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಆದ್ದರಿಂದ ಸೋಲನ್ನು ಸಹ ಮುಂದಿನ ಗೆಲುವಿನ ಮೆಟ್ಟಿಲು ಎಂದು ಭಾವಿಸಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನು ಹೇಳಿದರು.
ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ರತ್ನಾಕರ ದೇಶಭಂಡಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ ಬಂಗಾರಮಕ್ಕಿ ಶಾಲೆಯಲ್ಲಿ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.
ವೇದಿಕೆಯಲ್ಲಿ ಅನಿತಾ ನಾಯ್ಕ ಶ್ರಿ ಮಾರುತಿ ವಸತಿ ವಿದ್ಯಾಲಯದ ಆಡಳಿತ ನಿರ್ದೇಶಕರಾದ ಶ್ರೀ ಜಿ.ಟಿ. ಹೆಗಡೆ ಹಾಗೂ ಪ್ರಾಂಶುಪಾಲರಾದ ಶ್ರೀ ಶ್ರೀನಿವಾಸ ಬಿ. ಕೆ., ಶ್ರೀ ರತ್ನಾಕರ ದೇಶಭಂಡಾರಿ (ಸಿ.ಆರ್.ಪಿ.) ಕೃಷ್ಣ ಮರಾಠಿ ಹಾಡಗೇರಿ, ಮತ್ತಿತರರು ಉಪಸ್ಥಿತರಿದ್ದರು.
ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಒಟ್ಟೂ 15 ಶಾಲೆಗಳು ಭಾಗವಹಿಸಿದ್ದವು. ಸಭಾ ಕಾರ್ಯಕ್ರಮದ ನಂತರ ಆಯಾ ವೈಯಕ್ತಿಕ ವಿಭಾಗದ ಸ್ಪರ್ಧೆಗಳನ್ನು ಶ್ರೀ ಮಾರುತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ನಡೆಸಲಾಯಿತು. ಮತ್ತು ಛದ್ಮವೇಷ ಜಾನಪದ, ನೃತ್ಯ, ಕೋಲಾಟ ಸ್ಪರ್ಧೇಗಳನ್ನು ಸಭಾ ವೇದಿಕೆಯಲ್ಲಿ ನಡೆಸಲಾಯಿತು.

watermarked 40

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News, Canara News Tagged With: ಒಂದು ನಾಣ್ಯದ ಎರಡು ಮುಖ, ಕ್ಲಸ್ಟರ ಮಟ್ಟ, ನಡೆಯಿತು, ಪರಿಸರವಿರುವ, ಪ್ರತಿಭಾ ಕಾರಂಜಿ, ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ, ಯಲ್ಲಿ, ಶ್ರೀ ಕ್ಷೇತ್ರ ಬಂಗಾರಮಕ್ಕಿ, ಶ್ರೀ ವೀರಾಂಜನೇಯ ಕ್ಷೇತ್ರ, ಸೋಲು-ಗೆಲುವು ಸಹಜ

Explore More:

About Vishwanath Shetty

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...