ಹೊನ್ನಾವರ:
ಜಿಲ್ಲೆಯ ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವ ಎಂದು ಪ್ರಸಿದ್ದತೆ ಪಡೆದಿರುವ ಹೊನ್ನಾವರ ಪಟ್ಟಣದ ಟಪ್ಪರ್ ಹಾಲ್‍ನಲ್ಲಿನ ವಿಶ್ವಹಿಂದೂ ಪರಿಷತ್ ಗಣೇಶೋತ್ಸವ ಈ ವರ್ಷ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿದ್ದು 9 ದಿನಗಳಪರ್ಯಂತ ವಿಜ್ರಂಭಣೆಯಿಂದ ನಡೆದ ಗಣೇಶೋತ್ಸವ ಶಾಶ್ವತವಾಗಿ ನೆನಪಿಡುವ ರೀತಿಯಲ್ಲಿ ಸಂಪನ್ನಗೊಂಡಿತು.
ತಾಲೂಕಿನ ಇತಿಹಾಸದಲ್ಲಿಯೇ ಅತ್ಯಂತ ಅದ್ಧೂರಿ ಮೆರವಣಿಗೆ ಎಂದು ಕರೆಸಿಕೊಳ್ಳುವ ರೀತಿಯಲ್ಲಿ ಭವ್ಯ ಶೋಭಾಯಾತ್ರೆಯಲ್ಲಿ ಸರಿಸುಮಾರು 4 ರಿಂಧ 5 ಸಾವಿರಕ್ಕೂ ಅಧಿಕ ಜನರು ಪಾಲ್ಗೊಲಿಂಡಿರುವುದು ವಿಶೇಷವಾಗಿತ್ತು. ಪಟ್ಟಣದ ಬೀದಿಗಳಲ್ಲಿ ಮೆರವಣೆಗೆ ಸಾಗುವಾಗ ಕೇಸರಿಯ ಸಮವಸ್ತ್ರ ತೊಟ್ಟ ಸಾವಿರಾರು ಹಿಂದೂ ಕಾರ್ಯಕರ್ತರು ಗಣಪತಿ ಬಪ್ಪಾ ಮೋರಯಾ ಎಂದು ಘೋಷಣೆಯ ಜೋತೆ ಕುಣಿದು ಕುಪ್ಪಳಿಸಿದರು. ಪಟ್ಟಣದ ಬೀದಿಗಳಲ್ಲಿ ಸಾಗುವಾಗ ಅಪಾರ ಪ್ರಮಾಣದಲ್ಲಿ ಮಹಿಳೆಯರೂ ಪಾಲ್ಗೊಂಡು ಅವರೊಂದಿಗೆ ಹೆಜ್ಜೆಹಾಕಿರುವುದು ಇನ್ನೊಂದು ವಿಶೇಷವಾಗಿತ್ತು. ಸ್ತಬ್ದಚಿತ್ರ ಮೆರವಣೆಯಲ್ಲಿಗೆಯಲ್ಲಿ ಆಕರ್ಷಕವಾದ ಶಿವಾಜಿ, ಆಂಜನೇಯ, ಅಯ್ಯಪ್ಪ, ಶಿವನ ಮೆರವಣಿಗೆಯ ಕಳೆಯನ್ನು ಹೆಚ್ಚಿಸಿದರೆ ಜಾನಪದ ಕಲಾ ತಂಡಗಳು, ಮಂಗಳೂರಿನ ನಾಸಿಕ್ ಬ್ಯಾಂಡ್, ಉಪ್ಪುಂದದ ಮಹಿಳೆಯರ ಚಂಡೆವಾದನಗಳು ನೋಡುಗರನ್ನು ಇನ್ನಷ್ಟು ಸಂತಸ ಮೂಡುವಂತೆ ಮಾಡಿತು. ಯುವಕರಂತೂ ಭಗವಾದ್ವಜವನ್ನು ತಿರುಗಿಸುತ್ತಾ ಜೈ ಶ್ರೀರಾಮ ಘೋಷಣೆಯೊಂದಿಗೆ ಕುಣಿದು ಕುಪ್ಪಳಿಸಿದರು. ಶರಾವತಿ ವೃತ್ತದಿಂದ ಹೊರಟ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ 5 ಗಂಟೆಗೂ ಅಧಿಕ ಕಾಲ ಸಾಗಿ ಶರಾವತಿ ನದಿಯಲ್ಲಿ ಮಂಗಲಮೂರ್ತಿಯನ್ನು ವಿಸರ್ಜಿಸಲಾಯಿತು. ಹೆದ್ದಾರಿಯಲ್ಲಿ ಸಾಗುವಾಗ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಿರುವ ಜೊತೆ ಶಾಂತಿ ಸುವವ್ಯವಸ್ತೆಗಾಗಿ ಬಿಗಿ ಪೋಲಿಸ್ ಬಂದವಸ್ತ ಏರ್ಪಡಿಸಲಾಗಿತ್ತು.
Leave a Comment