
ಗೋಕರ್ಣ: ಮೋಡರ್ನ ಎಜ್ಯುಕೇಶನ್ ಟ್ರಸ್ಟ್(ರಿ.) ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಹಾಗೂ ಭಾರತದ ದ್ವಿತೀಯ ಪ್ರಧಾನಿಯಾದ ಲಾಲ್ ಬಹದ್ದೂರ ಶಾಸ್ತ್ರೀಜಿಯವರ ಜನ್ಮದಿನವನ್ನು ಶೃದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಾಲೆಯ ಶಿಕ್ಷಕವೃಂದದವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಗಾಂಧೀಜಿಯವರ ಬಗ್ಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಏರ್ಪಡಿಸಿ, ವಿದ್ಯಾರ್ಥಿನಿಯಾದ ನವ್ಯಾ ಪೈ ಹಾಗೂ ತಂಡದಿಂದ ಮಹಾತ್ಮ ಗಾಂಧೀಜಿಯವರಿಗೆ ಪ್ರಿಯವಾಗಿದ್ದ ಗೀತೆಗಳ ಗಾಯನ ಮತ್ತು ಭಜನೆ ಕಾರ್ಯಕ್ರಮವನ್ನು ನೀಡಿ, ಎಲ್ಲರ ಗಮನವನ್ನು ಸೆಳೆದರು. ದೈಹಿಕ ಶಿಕ್ಷಕರಾದ ನಿತ್ಯಾನಂದ ಗೌಡ ಅವÀರು ಸ್ವಚ್ಛತಾ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.
ಆನಂತರ ಶಾಲೆಯ ಸ್ಕೌಟ್ ಮತ್ತು ಗೈಡ್ಸ್‍ದಳ ಹಾಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕವೃಂದದವರು ಶಾಲಾ ಆವರಣದ ಸ್ವಚ್ಛತೆಯಲ್ಲಿ ಪಾಲ್ಗೊಂಡರು. ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿನಿಸನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯಾಧ್ಯಾಪಕರಾದ ಶ್ರೀ ರಾಜೇಶ ಗೋನ್ಸಾಲ್ವೀಸ್ ಮತ್ತು ಉಷಾ ಆರ್ ನಾಯಕ ಉಪಸ್ಥಿತರಿದ್ದರು.
Leave a Comment