ಹಳಿಯಾಳ:- ರಾಮಾಯಣದ ಮಹತ್ವವನ್ನು ಈಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿಯವರಾಗಿದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದರೇ ಸಮಾಜ ಸುಧಾರಣೆ ಸಾಧ್ಯವೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯಪಟ್ಟರು.
ತಾಲೂಕಾಡಳಿತ, ತಾಲೂಕ ಪಂಚಾಯತ, ಪುರಸಭೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಲೂಕಿನ ಎಲ್ಲ ಮಹರ್ಷಿ ವಾಲ್ಮೀಕಿ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉಧ್ಘಾಟಿಸಿ ಮಾತನಾಡಿದರು.
ಜಿಪಂ ಉಪಾಧ್ಯಕ್ಷ ಸಂತೋಷ ರೆಣಕೆ ಮಾತನಾಡಿದರು. ನಿವೃತ್ತ ಉಪನ್ಯಾಸಕ ಸುರೇಶ ಕಡೇಮನಿ ಉಪನ್ಯಾಸ ನೀಡಿದರು.
ವೇದಿಕೆ ಕಾರ್ಯಕ್ರಮದ ಮೊದಲು ಪಟ್ಟಣದ ಗಣೇಶ ಕಲ್ಯಾಣ ಮಂಟಪದಿಂದ ವಾಲ್ಮೀಕಿ ಅವರ ಬೃಹತ್ ಭಾವಚಿತ್ರದೊಂದಿಗೆ ಡೊಳ್ಳು ವಾದನ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಸಿ ಮಿನಿ ವಿಧಾನಸೌಧಕ್ಕೆ ತಲುಪಿ ಶೋಭಾಯಾತ್ರೆ ಸಮಾರೋಪಗೊಂಡಿತು. ವೇದಿಕೆ ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮಾಜದ ಸಾಧಕರನ್ನು ಸನ್ಮಾನಿಸಲಾಯಿತು.
ವೇದಿಕೆಯ ಮೇಲೆ ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ತಾಪಂ ಅಧ್ಯಕ್ಷೇ ರೀಟಾ ಸಿದ್ದಿ, ಜಿಪಂ ಸದಸ್ಯ ಕೃಷ್ಣಾ ಪಾಟೀಲ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಕುರಿಯವರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಂಬಿ ಸಣ್ಣೇರ್, ಆಧ್ಯಾತ್ಮಿಕ ಚಿಂತಕ ಎಮ್ಎನ್ ತಳವಾರ, ಸಿದ್ದಪ್ಪಾ ಬೀರಾದಾರ ಮೊದಲಾದವರು ಇದ್ದರು.
Leave a Comment