• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ

November 5, 2018 by Gaju Gokarna Leave a Comment

watermarked 05 hnr New Microsoft Office Word Document.

ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ಮಾರುತಿ ವಸತಿ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಮಕ್ಕಳು ಪ್ರಾರ್ಥನಾ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿದರು. ಶಾಲೆಯ ಆಡಳಿತ ನಿರ್ದೇಶಕರಾದ ಜಿ.ಟಿ.ಹೆಗಡೆ ಸರ್ ರವರು ಶಾಲೆಯ ಪ್ರಾಂಶುಪಾಲರಾದ ಶ್ರೀನಿವಾಸ ಬಿ. ಕೆ. ರವರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಕನ್ನಡಾಂಬೆಗೆ ಪುಷ್ಪ ಸಮರ್ಪಣೆ ಮಾಡಿದರು. ವಿದ್ಯಾರ್ಥಿನಿ ಅವನಿ ಭಟ್ ವೇದಿಕೆಯ ಮೇಲೆ ಉಪಸ್ಥಿತರಿರುವ ಗಣ್ಯರನ್ನು ಸ್ವಾಗತಿಸಿದಳು. ವಿದ್ಯಾರ್ಥಿ ಸಂಜೀವ ನಾಯ್ಕ ಮತ್ತು ತೇಜಸ್ ಹೆಗಡೆ ಕನ್ನಡ ರಾಜ್ಯೋತ್ಸವದ ಕುರಿತು ಭಾಷಣವನ್ನು ಮಾಡಿದರು. ಕನ್ನಡ ಭಾಷಾ ಶಿಕ್ಷಕರಾದ ಆದರ್ಶ ರೇವಣಕರರವರು ತಮ್ಮ ಭಾಷಣಗಳ ಮೂಲಕ ಕನ್ನಡ ಭಾಷೆಯನ್ನು ಉಳಿಸುವ ಮತ್ತು ಬೆಳೆಸುವ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸಿದರು. ಶಾಲಾ ಮಕ್ಕಳಿಗೆ ಕನ್ನಡ ಭಾವಗೀತೆ ಸ್ಪರ್ಧೆಯನ್ನು ಎರ್ಪಡಿಸಲಾಗಿತ್ತು.
ಪ್ರಾಂಶುಪಾಲರಾದ ಶ್ರೀನಿವಾಸ ಬಿ. ಕೆ. ಮಾತನಾಡಿ ಮಾತೃಭಾಷೆಗಿಂತ ಮಿಗಿಲಾದದ್ದು ಯಾವುದು ಇಲ್ಲ. ನಮ್ಮ ಭಾವನೆಗಳನ್ನು ಇತರರಿಗೆ ಮನ ಮುಟ್ಟುವಂತೆ ಮಾಡುವ ಸರಳ ಭಾಷೆ – ಕನ್ನಡ. ಭಾಷೆ, ದೇಶಾಭಿಮಾನಗಳ ಜೊತೆಗೆ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಮಕ್ಕಳಿಗೆ ತಿಳಿ ಹೇಳಿದರು.
ಆಡಳಿತ ನಿರ್ದೇಶಕರಾದ ಜಿ.ಟಿ.ಹೆಗಡೆ ಮಾತನಾಡಿ ಕೊನೆಯ ಉಸಿರಿರುವವರೆಗೂ ಕನ್ನಡ ಭಾಷೆಬೇಕು. ಕನ್ನಡದ ದೀಪ ಯಾವಾಗಲೂ ಪ್ರಜ್ವಲಿತವಾಗಿರುವಂತೆ ಮಾಡುವುದು ಕನ್ನಡಿಗರ ಕರ್ತವ್ಯ. ಕತೆ, ಕಾದಂಬರಿ, ಮಾಸಪತ್ರಿಕೆ, ದಿನಪತ್ರಿಕೆ ಓದಿ ಭಾಷಾ ಜ್ಞಾನ ಬೆಳೆಸಿಕೊಳ್ಳುವಂತೆ ಮಕ್ಕಳಿಗೆ ಹಿತವಚನ ನುಡಿದರು.
ನಂತರ ಶಿಕ್ಷಕಿಯರಾದ ಶಕುಂತಲಾ ನಾಯ್ಕ, ಶ್ವೇತಾ ಹೆಗಡೆ, ಮತ್ತು ಅಮೃತಾ ರಾಯ್ಕರ ರವರು ಕನ್ನಡ ನಾಡು-ನುಡಿಯ ಕುರಿತಾದ ಹಾಡನ್ನು ಸುಶ್ರಾವ್ಯವಾಗಿ, ಮಧುರವಾಗಿ ಹಾಡಿದರು.
ಈ ಎಲ್ಲಾ ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನೀಯರಾದ ಅನನ್ಯ ಶೇಟ್ ಮತ್ತು ನಂದಿತಾ ನಾಯ್ಕ ಅಚ್ಚುಕಟ್ಟಾಗಿ ನಿರ್ವಹಿಸಿದರು. ಹಾಗೂ ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿ ಅನಘಾ ಭಟ್ ಸರ್ವರನ್ನೂ ವಂದಿಸಿದಳು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News, Canara News Tagged With: ಕನ್ನಡ ರಾಜ್ಯೋತ್ಸವ ಆಚರಣೆ, ಕರ್ತವ್ಯ. ಕತೆ, ಕಾದಂಬರಿ, ದಿನಪತ್ರಿಕೆ ಓದಿ, ಪ್ರಾರ್ಥನಾ ಗೀತೆಯನ್ನು ಸುಶ್ರಾವ್ಯ, ಭಾಷಾ ಜ್ಞಾನ ಬೆಳೆಸಿಕೊಳ್ಳುವಂತೆ, ಮಕ್ಕಳಿಗೆ ಹಿತವಚನ, ಮಾರುತಿ ವಸತಿ ವಿದ್ಯಾಲಯ, ಮಾಸಪತ್ರಿಕೆ, ಸಂಭ್ರಮದಿಂದ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...