ಯಲ್ಲಾಪುರ: ಮದುವೆ ಕಾರ್ಯದ ನಿಮಿತ್ತ ಯಲ್ಲಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೇಡ್ತಿ ಸೇತುವೆ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಬಸ್ಸಿನಲ್ಲಿದ್ದವರಲ್ಲಿ ಮೂವರಿಗೆ ತೀವ್ರತರವಾದ ಪೆಟ್ಟಾಗಿದ್ದು, 10 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಅಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಯಲ್ಲಾಪುರ ಶಹರ ಪೋಲಿಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.









Leave a Comment