ಹಳಿಯಾಳ :- ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿರುವ ಆಧುನಿಕ ಭಾತರದಲ್ಲಿ ಯುವಕ-ಯುವತಿಯರು ತಮಗೆ ಒದಗಿ ಬರುವ ಅವಕಾಶಗಳ ಸದುಪಯೋಗ ಪಡೆದು ಜೀವನದಲ್ಲಿ ಏನಾದರೂ ಸಾಧನೆ ಮಾಡುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾಗಿರುವ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ ಕರೆ ನೀಡಿದರು.
ಹಳಿಯಾಳದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ಗೆ ಭೇಟಿ ನೀಡಿದ ಅವರು ವಿವಿಡಿ ಸ್ಕೂಲ್ ಆಫ್ ಎಕ್ಸಲೆನ್ಸ್, ಐಟಿಐ, ದೇಶಪಾಂಡೆ ಆರ್‍ಸೆಟಿಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ವಿಕ್ಷೀಸಿದರು. ಈ ಸಂದರ್ಭದಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರು ಖುದ್ದಾಗಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಅವರಿಗೆ ವಿವರಿಸಿದರು. ಬಳಿಕ ಸಂಸ್ಥೆಯ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಸ್ತೂರಿರಂಗನ ಮಾತನಾಡಿದರು.
ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳತ್ತ ಗಮನ ಹರಿಸಬೇಕು. ದೇಶದ ಪ್ರಗತಿಗೆ ಕೊಡುಗೆ ನೀಡುವಲ್ಲಿ ಯುವ ಜನತೆ ಶ್ರಮಿಸಬೇಕೆಂದು ಕರೆ ನೀಡಿದ ಕಸ್ತೂರಿರಂಗನ ಸಚಿವ ಆರ್.ವಿ.ದೇಶಪಾಂಡೆ ಅವರ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಸಂಸ್ಥೆಯ ಕಾರ್ಯವನ್ನು ಪ್ರಶಂಸಿದರು.
ಕರ್ನಾಟಕ ಜ್ಞಾನ ಆಯೋಗದ ಕಾರ್ಯದರ್ಶಿ ಡಾ.ಮುಕುಂದರಾವ್ ಮಾತನಾಡಿ ಕೌಶಲ್ಯಾಭಿವೃದ್ದಿ ಚಟುವಟಿಕೆಗಳ ಬಗ್ಗೆ ದೇಶಪಾಂಡೆ ರುಡಸೆಟ್‍ನಲ್ಲಿ ಹಮ್ಮಿಕೊಂಡಿರುವ ಉಚಿತ ತರಬೇತಿಗಳ ಬಗ್ಗೆ ಶ್ಲಾಘಿಸಿದರಲ್ಲದೇ ನಾವು ಮಾಡಬೇಕೆಂದಿರುವ ಕಾರ್ಯಗಳನ್ನು ಈಗಾಗಲೇ ಹಳಿಯಾಳದ ದೇಶಪಾಂಡೆ ಆರ್‍ಸೆಟ್‍ನಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಕ್ಕೆ ತಂದಿರುವುದು ನಿಜಕ್ಕೂ ಮಾದರಿ ಕಾರ್ಯವಾಗಿದ್ದು ಇಂತಹ ಸಂಸ್ಥೆಗಳು ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸಬೇಕಾಗಿದ್ದು ಸಚಿವ ದೇಶಪಾಂಡೆ ಅವರ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಸಾಮಾಜಿಕ ಕಾರ್ಯಗಳು ಎಲ್ಲರಿಗೂ ಮಾದರಿಯಾಗಿವೆ ಎಂದರು.
ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ ಸಂಸ್ಥೆಯಲ್ಲಿ ರಾಜ್ಯದ ಎಲ್ಲೆಡೆಯಿಂದ ನೂರಾರು ವಿದ್ಯಾರ್ಥಿಗಳು ಬಂದು ಉಚಿತ ತರಬೇತಿ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಈಗಾಗಲೇ 15ಸಾವಿರಕ್ಕೂ ಅಧಿಕ ಜನರಿಗೆ ಉಚಿತ ತರಬೇತಿ ನೀಡಿ ಅವರು ಜೀವನ ರೂಪಿಸಿಕೊಳ್ಳಲು ಎಲ್ಲ ರೀತಿಯಿಂದ ಅನುಕೂಲ ಮಾಡಿಕೊಡಲಾಗಿದೆ ಎಂದು ಸಂಸ್ಥೆಯ ಕಾರ್ಯಗಳ ಕುರಿತು ವಿವರಿಸಿದರು.
ಹಳಿಯಾಳಕ್ಕೆ ಹಾಗೂ ಆರ್‍ಸೆಟ್ ಸಂಸ್ಥೆಗೆ ಇದೆ ಮೊದಲ ಬಾರಿಗೆ ಭೇಟಿ ನೀಡಿದ ಡಾ.ಕೆ.ಕಸ್ತೂರಿರಂಗನ್ ಅವರನ್ನು ಸಚಿವ ಆರ್.ವಿ.ದೇಶಪಾಂಡೆಯವರು ಸಂಸ್ಥೆಯ ವತಿಯಿಂದ ಸನ್ಮಾನಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಸದಸ್ಯ ಶ್ಯಾಮ ಕಾಮತ, ಆಡಳಿತಾಧಿಕಾರಿ ಪ್ರಕಾಶ ಪ್ರಭು, ಆರ್‍ಸೆಟ್ ನಿರ್ದೇಶಕ ನಿತ್ಯಾನಂದ ವೈದ್ಯ ಸೇರಿದಂತೆ ಪ್ರಮುಖರು ಇದ್ದರು.
Leave a Comment