ಹಳಿಯಾಳ:- ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರ ಬಾಕಿ ಹಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ದಿ. 9 ರಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಹಾಗೂ ದಿ.10 ರಂದು ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ತಿಳಿಸಿದ್ದಾರೆ.
ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದ್ದು ಹಳಿಯಾಳ ಭಾಗದಿಂದಲೂ ಸಾವಿರಾರು ರೈತರು ಬೆಳಗಾವಿಗೆ ತೆರಳಿ ತಮ್ಮ ಹಕ್ಕಿಗಾಗಿ ಹೋರಾಟ ನಡೆಸಲಿದ್ದಾರೆಂದು ಹಳಿಯಾಳ ಕಬ್ಬು ಬೆಳೆಗಾರ ಸಂಘದ ರಾಜ್ಯ ಉಪಾದ್ಯಕ್ಷ ಮಲ್ಲಾರಿ ವಿ ಘಾಡಿ, ಅಶೋಕ ಮೇಟಿ, ರಾಮದಾಸ ಬೆಳಗಾಂವಕರ, ಗಿರೀಶ ಟೋಸೂರು, ಕುಮಾರ ಬೊಬಾಟಿ ಮುಂತಾದವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Leave a Comment