ಹಳಿಯಾಳ:- ಸಾಮಾಜಿಕ, ಆರ್ಥಿಕ, ಶೈಕ್ಷಣ ಕ ಸೇರಿದಂತೆ ಎಲ್ಲಾ ರಂಗಗಳಲ್ಲಿ ಹಿಂದೂಳಿದಿರುವ ಹಾಗೂ ಅರಣ್ಯವಾಸಿಗಳಾದ ಉತ್ತರ ಕನ್ನಡ ಜಿಲ್ಲೆಯ ದಟ್ಟ ಕಾಡುಗಳಲ್ಲಿ ವಾಸಿಸುತ್ತಿರುವ ಕುಣಬಿ ಜನಾಂಗವನ್ನು ಈವರೆಗೆ ಏಕೆ ಪರಿಶಿಷ್ಠ ಪಂಗಡಕ್ಕೆ ಸೇರಿಸಲಾಗಿಲ್ಲ ಎಂದು ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ಸದನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಸೋಮವಾರ ಪ್ರಶ್ನೇ ಕೇಳಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಕುಣಬಿ ಜನಾಂಗವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕೆಂದು ಸಾಕಷ್ಟು ಹೋರಾಟಗಳು ನಡೆದಿವೆ. ಅಲ್ಲದೇ ಎಲ್ಲಾ ರಂಗದಲ್ಲಿಯೂ ಅತ್ಯಂತ ಹಿಂದೂಳಿದಿರುವ ಈ ಸಮುದಾಯದವರು ಬುಡಕಟ್ಟು ಸಂಸ್ಕøತೀಯ ಎಲ್ಲಾ ಗುಣ ಲಕ್ಷಣಗಳನ್ನು ಹೊಂದಿದ್ದು ಕಳೆದ ಹಲವಾರು ವರ್ಷಗಳಿಂದ ಪರಿಶಿಷ್ಠ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸುತ್ತಾ ಬಂದರು ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆಯೇ ?
ಇವರನ್ನು ಯಾವ ಕಾರಣಕ್ಕಾಗಿ ಇಲ್ಲಿಯವರೆಗೆ ಎಸ್ಟಿಗೆ ಸೇರಿಸಿರುವುದಿಲ್ಲ ? ಎಂದು ಪ್ರಶ್ನೇಗಳನ್ನು ಕೇಳಿರುವ ಘೋಟ್ನೇಕರ ಈ ಕುರಿತು ಸರ್ಕಾರಕ್ಕೆ ಅನೇಕ ಬಾರಿ ವಿನಂತಿಸಿದ್ದು ಹಾಗೂ ಸದರಿ ವಿಷಯದಲ್ಲಿ ಕುಲಪತಿಗಳಿಂದ ಅಧ್ಯಯನ ನಡೆಸಿ ವರದಿ ಪಡೆಯಲಾಗುವುದೆಂದು ತಿಳಿಸಿದ್ದು. ಇಲ್ಲಿಯವರೆಗೆ ಯಾವುದೇ ರೀತಿಯಲ್ಲಿ ಕ್ರಮ ಕೈಗೊಳ್ಳದೆ ಇರುವುದು ನಿಜವೇ ? ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದೇ ಎಂದು ಕೇಳಿರುವ ಅವರು ವಿವರಗಳನ್ನು ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಕೇಳಿದ್ದಾರೆ.
ಈ ಕುರಿತು ಮಾಧ್ಯಮ ಪ್ರತಿನಿಧಿಯೊಂದಿಗೆ ದೂರವಾಣ ಮೂಲಕ ಮಾತನಾಡಿದ ವಿಪ ಸದಸ್ಯ ಘೋಟ್ನೇಕರ ಅವರು ಪಕ್ಕದ ಗೋವಾ ರಾಜ್ಯದಲ್ಲಿ ಕುಣಬಿ ಜನರನ್ನು ಪರಿಶಿಷ್ಠ ಜಾತಿಗೆ ಸೇರಿಸಲಾಗಿದೆ. ಆದರೇ ಕರ್ನಾಟಕದಲ್ಲಿ ಮಾತ್ರ ಈ ಜನಾಂಗಕ್ಕೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಸರ್ಕಾರ ಕೂಡಲೇ ಸಮೀತಿಯನ್ನು ರಚಿಸಿ ಈ ಜನಾಂಗದ ಬಗ್ಗೆ ಸಮಗ್ರ ಅಧ್ಯಯನ ನಡೆಸಬೇಕು.
ಅಲ್ಲದೇ ಗೋವಾ ಮಾದರಿಯಲ್ಲಿಯೇ ಕರ್ನಾಟಕ ರಾಜ್ಯದಲ್ಲಿಯೂ ಕೂಡ ಕುಣಬಿ ಜನಾಂಗವನ್ನು ಪರಿಶಿಷ್ಠ ಪಂಗಡಕ್ಕಾದರೂ ಸೇರಿಸಿ ಎಲ್ಲಾ ರಂಗದಲ್ಲೂ ಹಿಂದೂಳಿದಿರುವ ಅರಣ್ಯವಾಸಿಗಳ ಇವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
Leave a Comment