• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಧಾರ್ಮಿಕ ಕ್ಷೇತ್ರಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ;ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ

December 22, 2018 by Gaju Gokarna Leave a Comment

watermarked hnr 22 v.

ಹೊನ್ನಾವರ: ಜನರಲ್ಲಿ ಬಡತನ, ಬರಗಾಲ, ಮೂಲಭೂತ ಸಮಸ್ಯೆಗಳಿಂದ ನಮ್ಮನ್ನು ಆಳುವ ಸರ್ಕಾರಕ್ಕಿಂತ `ಕಣ ್ಣಗೆ ಕಾಣದ ಅಗೋಚರ ಶಕ್ತಿಯು ಕಾಪಾಡುತ್ತದೆ’ ಎಂಬ ನಂಬಿಕೆ ಜನರಲ್ಲಿ ಬಲವಾಗಿ ಬೇರೂರಿದೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತ ಹೇಳಿದರು.
ತಾಲೂಕಿನ ಚಿಕ್ಕನಕೋಡದ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳು ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ. ಜನರು ತಮ್ಮೂರಿನ ರಸ್ತೆ, ನೀರು ಮುಂತಾದ ಮೂಲಭೂತ ಸಮಸ್ಯೆಗಳಿಗಿಂದ ದೇವಸ್ಥಾನಗಳ ಅಭಿವೃದ್ಧಿಗೆ ಹೇಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಜನಪ್ರತಿನಿಧಿಗಳು, ಮುಖ್ಯಮಂತ್ರಿಗಳು ಕ್ಷಣ ಕ; ದೈವೀ ಶಕ್ತಿಯ ಪ್ರಭಾವ ಅತ್ಯಂತ ಮಹತ್ವವಾದುದು ಎಂಬ ಭಾವನೆ ಜನರಲ್ಲಿದೆ. ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಶ್ರಮಿಸುವ ಮೂಲಕ ಮುಂದಿನ ಜನಾಂಗಕ್ಕೆ ಇದನ್ನು ಕೊಡುಗೆಯಾಗಿ ನೀಡುವ ಕೆಲಸವಾಗಬೇಕು ಎಂದರು.
ಕಸಾಪ ತಾಲೂಕು ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಮಾತನಾಡಿ, ಧಾರ್ಮಿಕ ಕ್ಷೇತ್ರಗಳಿಗೆ ಜನರನ್ನು ಒಂದುಗೂಡಿಸುವ ಶಕ್ತಿಯಿದೆ. ಇವು ಸಾಂಸ್ಕøತಿಕ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ ಸೃಜನಶೀಲ, ರಚನಾತ್ಮಕ ಚಟುವಟಿಕೆಗಳನ್ನು ಮಾಡಲು ಅವಕಾಶ ಒದಗಲಿ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸರ್ಜನ್ ಡಾ. ಮಂಜುನಾಥ ಶೆಟ್ಟಿ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ಹೆಗಡೆ, ಆರ್.ಪಿ.ನಾಯ್ಕ, ಅಯ್ಯಪ್ಪ ನಾಯ್ಕ, ದಯಾನಂದ ನಾಯ್ಕ, ಸುರೇಶ ಶಿವರಾಮ ನಾಯ್ಕ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.
ವರ್ಧಂತಿ ಉತ್ಸವದ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅಲಂಕಾರ, ಸಾಮೂಹಿಕ ಸತ್ಯನಾರಾಯಣ ವೃತ, ನವಚಂಡಿಹೋಮ, ಕಲಾಭೀಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂತರ್ಪಣೆ ನಡೆದವು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Honavar News, Canara News Tagged With: ಚಿಕ್ಕನಕೋಡದ ಶ್ರೀ ದುರ್ಗಾಂಬಾ ದೇವಸ್ಥಾನ, ಜೆಡಿಎಸ್ ಮುಖಂಡ, ದೈವೀ ಶಕ್ತಿಯ ಪ್ರಭಾವ ಅತ್ಯಂತ ಮಹತ್ವ, ಧಾರ್ಮಿಕ ಕ್ಷೇತ್ರಗಳು, ಬಡತನ, ಬರಗಾಲ, ಮನುಷ್ಯನಿಗೆ ನೆಮ್ಮದಿ ನೀಡುವ ಕೇಂದ್ರಗಳಾಗಿವೆ, ಮೂಲಭೂತ ಸಮಸ್ಯೆ, ವಾರ್ಷಿಕ ವರ್ಧಂತಿ ಉತ್ಸವ, ವೈ.ಎಸ್.ವಿ ದತ್ತ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,060 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...