ಹಳಿಯಾಳ:- ಮಹಿಳೆಯರು ಇಂದು ಎಲ್ಲ ಅಡೆತಡೆಗಳನ್ನು ಮೀರಿ ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೆಳ್ಳುವುದು ಅವಶ್ಯಕವಾಗಿದೆ ಎಂದು ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ ವಿ ಕಟ್ಟಿ ಹೇಳಿದರು.
ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಮಹಿಳೆಯರ ಕಾನೂನಾತ್ಮಕ ಹಕ್ಕುಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ, ಬೇಟಿ ಬಚಾವೊ ಕಾರ್ಯಕ್ರಮ ಹಾಗೂ “ಮಹಿಳೆಯರ ಕಾನೂನಾತ್ಮಕ ಹಕ್ಕು” ಕುರಿತಾದ ಸ್ಪರ್ದೆಗೆ ಚಾಲನೆ ನೀಡಿ ಮಾತನಾಡಿದರು.
ಸ್ಪರ್ದೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪಾರಿತೋಷಕವನ್ನು ನೀಡಿ ಪುರಸ್ಕರಿಸಲಾಯಿತು. ಕಾರ್ಯಕ್ರಮವನ್ನು ಭಾರತ ಸರ್ಕಾರದ ಮಹಿಳಾ ಆಯೋಗದ ‘ಬೇಟಿ ಬಚಾವೋ’ ಆಂದೋಲನದ ಅಡಿಯಲ್ಲಿ ಆಯೋಜಿಸಲಾಗಿತ್ತು. ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರೊ. ಪೂಣ ್ಮಾ ರಾಯ್ಕರ್, ಡಾ|| ಮೀನಲ್ ಕೆ ಇದ್ದರು.
Leave a Comment