• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ವಸಹಾಯ ಸಂಘಕ್ಕೆ ನೀಡಿದ ಸಹಾಯ-ಸೌಲಭ್ಯಗಳನ್ನು ಸದುಪಯೋಗಿಸಿಕೊಳ್ಳಿ- ಸಚಿವ ಆರ್ ವಿ ದೇಶಪಾಂಡೆ

January 2, 2019 by Yogaraj SK Leave a Comment

watermarked 2 hly 5 1

ಹಳಿಯಾಳ: ಸರ್ಕಾರ ಸ್ವಸಹಾಯ ಸಂಘಗಳಿಗೆ ನೀಡಿದ ಸಹಾಯ-ಸೌಲಭ್ಯಗಳನ್ನು ದೊರುಪಯೋಗ ಪಡಿಸಿಕೊಳ್ಳದೆ- ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಉನ್ನತಿ ಸಾಧಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸ್ವಸಾಯ ಸಂಘದ ಸದಸ್ಯರಿಗೆ ಕರೆ ನೀಡಿದರು.
ಪಟ್ಟಣದ ಡಾ.ಬಾಬು ಜಗಜೀವನರಾಮ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚಾರಣೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪ.ಪಂ. ಅಭಿವೃದ್ಧಿ ನಿಗಮ ಕಾರವಾರ ಹಾಗೂ ತಾ.ಪಂ ಆಡಳಿತ ಹಳಿಯಾಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಸಿದ್ದಿ ಪ್ಯಾಕೇಜ್ ಮೈಕ್ರೋ ಕ್ರೇಡಿಟ್ ಕಿರುಸಾಲ ಯೋಜನೆಯಡಿಯಲ್ಲಿ ಆಯ್ಕೆಯಾದ ಸಂಘದ ಸದಸ್ಯರಿಗೆ ಮಂಜೂರಾತಿ ಪ್ರಮಾಣ ಪತ್ರ ವಿತರಣೆ ಮತ್ತು ಕೇಂದ್ರಸರ್ಕಾರ ಸಂಯೋಗದೊಂದಿಗೆ ಮುಖ್ಯಮಂತ್ರಿ ಅನಿಲ ಭಾಗ್ಯ ಫಲಾನುಭವಿಗಳಿಗೆ ಅಡುಗೆ ಅನಿಲ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಕಲಚೇತನರು ಸ್ವಾವಲಂಭಿ ಜೀವನ ನಡೆಸಲು ನಾವೆಲ್ಲರೂ ಸಹಾಯ ಮಾಡಬೇಕು. ಹಾಗೂ ಬಡತನದಿಂದ ದೂರಾಗಬೇಕಾದರೆ ಅವರ ಕಷ್ಟಕ್ಕೆ ಕೈಜೋಡಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಲ್ಲಿ ಹಾಗೂ ವಿವಿದ ಸ್ವಸಹಾಯ ಸಂಘಗಳಿಗೆ ಚೆಕ್ ವಿತರಣೆ, ಮಾಡಲಾಯಿತು. ಮತ್ತು ಗಂಗಾ ಕಲ್ಯಾಣ ಸಿದ್ದಿ ಪ್ಯಾಕೇಜ ಯೋಜನೆಯಡಿಯಲ್ಲಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುದ್ದಿಕರಣಗೊಳಿಸಲು ಫಲಾನುಭಾವಿಗಳಿಗೆ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಕಳೆದ ಡಿ.17ರಂದು ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಬಟ್ಟೆ ತೊಳೆಯಲು ಹೋದ ನಾಲ್ವರು ಕಾಳಿನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರ ಚೆಕ್ ವಿತರಿಸಲಾಯಿತು. ಮಕ್ಕಳ ಶಿಕ್ಷಣಕ್ಕಾಗಿ ಉಪಯೋಗವಾಗುವಂತೆ ನೋಡಿಕೊಳ್ಳಲು ಸಂಬಂಧಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಸಂತೋಷ ರೇಣಕೆ, ಸದಸ್ಯ ಕೃಷ್ಣಾ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಭಾಸ ಕೊರ್ವೇಕರ, ಸಿದ್ದಿ ಸಮುದಾಯದ ಮುಖ್ಯಸ್ಥ ಡೀಯೋಗ ಸಿದ್ದಿ, ತಾಪಂ ಅಧಿಕಾರಿ ಡಾ.ಮಹೇಶ ಕುರಿಯವರ, ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರಾದ ರವಿಂದ್ರ ಮೆಟಗುಡ್, ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಮುಲ್ಲಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗೇಶ ನಾಯ್ಕ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: ಅಭಿವೃದ್ಧಿ ನಿಗಮ ಕಾರವಾರ, ಆರ್.ವಿ.ದೇಶಪಾಂಡೆ ಸ್ವಸಾಯ ಸಂಘದ ಸದಸ್ಯರಿಗೆ ಕರೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪ.ಪಂ., ಕಾಳಿನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ, ಗಂಗಾ ಕಲ್ಯಾಣ ಸಿದ್ದಿ ಪ್ಯಾಕೇಜ ಯೋಜನೆ, ಗ್ರಾಮದಲ್ಲಿ, ತಲಾ ಎರಡು ಲಕ್ಷ ರೂಪಾಯಿಗಳ, ಪರಿಹಾರ ಚೆಕ್, ಬಟ್ಟೆ ತೊಳೆಯಲು ಹೋದ ನಾಲ್ವರು, ಮಾಡಲಾಯಿತು., ಸಚಿವ ಆರ್ ವಿ‌ ದೇಶಪಾಂಡೆ, ಸದಸ್ಯರಿಗೆ ಮಂಜೂರಾತಿ ಪ್ರಮಾಣ ಪತ್ರ, ಸದುಪಯೋಗಿಸಿಕೊಳ್ಳಿ, ಸ್ವಸಹಾಯ ಸಂಘಕ್ಕೆ ನೀಡಿದ ಸಹಾಯ-ಸೌಲಭ್ಯ, ಸ್ವಸಹಾಯ ಸಂಘಗಳಿಗೆ ಚೆಕ್ ವಿತರಣೆ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...