• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಮಂಕಿ ಸರಕಾರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಉದ್ಘಾಟನೆ

January 17, 2019 by Gaju Gokarna Leave a Comment

watermarked 17 hnr manki

ಹೊನ್ನಾವರ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಕಿ ಇದರ ಆಂತರಿಕ ಗುಣಮಟ್ಟ ಮೌಲ್ಯಾಂಕನ ಕೋಶ ಮತ್ತು ಉದ್ಯೋಗ ಮಾಹಿತಿ ಕೋಶ ಇದರ ಅಡಿಯಲ್ಲಿ ಸ್ಫರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವನ್ನು ಉದ್ಘಾಟನೆ ಮಾಡಲಾಯಿತು. ಹೊನ್ನಾವರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ವಿ ವಸಂತ ರೆಡ್ಡಿ, ಐ.ಎಫ್.ಎಸ್ ಇವರು ಹೂವಿನ ಗಿಡಕ್ಕೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ “ವಿದ್ಯಾರ್ಥಿ ಜೀವನದಲ್ಲಿಯೇ ಉನ್ನತ ಹುದ್ದೆಯ ಗುರಿಗಳನ್ನು ಇಟ್ಟುಕೊಂಡು ಪ್ರಾಮಾಣ ಕವಾಗಿ ಪ್ರಯತ್ನಿಸಿದರೆ ಅದನ್ನು ಸಾಧಿಸಲು ಸಾಧ್ಯವಿದೆ. ಉನ್ನತ ಹುದ್ದೆಗಳನ್ನು ಪಡೆದಾಗ ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ದೊರಕುತ್ತದೆ” ಎಂದು ಹೇಳಿದರು. ತನ್ನ ವಿದ್ಯಾರ್ಥಿ ಜೀವನ, ಐ.ಎಫ್.ಎಸ್ ಪರೀಕ್ಷಾ ತಯಾರಿ ಇತ್ಯಾದಿ ಅನುಭವಗಳನ್ನು ಹಂಚಿಕೊಂಡರು ಹಾಗೂ ವಿದ್ಯಾರ್ಥಿಗಳಿಗೆ ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಕಾಲೇಜಿನ ಶಿಕ್ಷಕರ ಕಾರ್ಯವನ್ನು ಶ್ಲಾಘಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಬಸವರಾಜ ದಳವಾಯಿ ” ಹೊಟ್ಟಗೆ ಅನ್ನ ನೀಡದ ಶಿಕ್ಷಣದಿಂದ ಯಾವ ಪ್ರಯೋಜನವೂ ಇಲ್ಲ, ನೀವು ಪಡೆಯುವ ಉದ್ಯೋಗವು ನಿಮ್ಮ ಭವಿಷ್ಯವನ್ನು ರೂಪಿಸಬೇಕು. ಈ ದಿಸೆಯಲ್ಲಿ ನಿಮ್ಮನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರು ಮಾಡುವ ಉದ್ದೇಶದಿಂದ ಈ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗಿದೆ” ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಭಟ್ಕಳ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಾಲಚಂದ್ರ ಎಚ್.ಸಿ ಮಾತನಾಡಿ ” ಗ್ರಾಮಾಂತರ ಪ್ರದೇಶಗಳಲ್ಲಿ ಇಂತಹ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದರಿಂದ ಈ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತ ಹುದ್ದೆಗಳನ್ನು ದೊರಕಿಸಿಕೊಡಲು ಸಹಕಾರಿಯಾಗುತ್ತದೆ.” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ವಿ.ಜಿ.ಗಣೇಶ ಮಾತನಾಡಿ “ನಮ್ಮ ಕಾಲೇಜಿನ ನುರಿತ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಬಿಡುವಿನ ವೇಳೆಯಲ್ಲಿ ತರಗತಿಗಳನ್ನು ನಡೆಸಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಸೂಕ್ತ ತರಬೇತಿ ನೀಡಲಿದ್ದು, ಎಲ್ಲಾ ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಗ್ರಂಥಪಾಲಕರಾದ ಲಕ್ಷ್ಮೀಶ ಎಚ್, ಸಹಾಯಕ ಪ್ರಾಧ್ಯಾಪಕರಾದ ರಾಘವೇಂದ್ರ ಶೆಟ್ಟಿ, ಅಣ್ಣಪ್ಪ ನಾಯ್ಕ, ಮಲ್ಲನಗೌಡ ಕುಲಕಣ ್, ಮಾದೇಶ, ಪೀರಜಾದೆ ಮೊಹಮ್ಮದ ಅಸ್ಲಂ, ಎಲ್ಲಾ ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಮುಕ್ತಾ ನಾಯ್ಕ ಮತ್ತು ಶ್ವೇತಾ ನಾಯ್ಕ ಪ್ರಾರ್ಥಿಸಿದರು. ಸಹಾಯಕ ಪ್ರಾಧ್ಯಾಪಕ ವೆಂಕಟಮೂರ್ತಿ ವಂದಿಸಿದರು. ಸೌಮ್ಯ ನಾಯ್ಕ ನಿರೂಪಿಸಿದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Honavar News Tagged With: Central Opening, Competitive Testing Training at Monkey Government College, Employment Information Cell, IFS, Internal Quality Valuation Cell, Programs, ಆಂತರಿಕ ಗುಣಮಟ್ಟ ಮೌಲ್ಯಾಂಕನ ಕೋಶ, ಉದ್ಯೋಗ ಮಾಹಿತಿ ಕೋಶ, ಐ.ಎಫ್.ಎಸ್, ಕಾರ್ಯಕ್ರಮ, ಕೇಂದ್ರ ಉದ್ಘಾಟನೆ, ಮಂಕಿ ಸರಕಾರಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ, ಹೂವಿನ ಗಿಡಕ್ಕೆ ನೀರು ಎರೆಯುವುದರ ಮೂಲಕ, ಹೊಟ್ಟಗೆ ಅನ್ನ ನೀಡದ ಶಿಕ್ಷಣ

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,057 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...