• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿ.ಆರ್.ಡಿ.ಎಂ ಟ್ರಸ್ಟ್ ಆಶ್ರಯದಲ್ಲಿ ಜ:18 ರಂದು ದಾಂಡೇಲಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

January 17, 2019 by Yogaraj SK Leave a Comment

50064687 793545537666511 216823929220628480 n
ದಾಂಡೇಲಿ : ಕಳೆದ ಮೂರು ವರ್ಷಗಳ ಹಿಂದೆ ದಾಂಡೇಲಿಯಲ್ಲಿ ಮೇಳೈಸಿದ್ದ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಳ್ವಾಸ್ ಸಾಂಸ್ಕೃತಿಕ ವೈಭವ ಅಂದರೆ ಆಳ್ವಾಸ್ ನುಡಿಸಿರಿ ಕಾರ್ಯಕ್ರಮವು ಹಳಿಯಾಳದ ಶ್ರೀ.ವಿ.ಆರ್.ಡಿ.ಎಂ ಟ್ರಸ್ಟ್ ಆಶ್ರಯದಲ್ಲಿ ಇದೇ ಜನವರಿ ತಿಂಗಳ 18 ರಂದು ಸಂಜೆ 6 ಗಂಟೆಗೆ  ನಗರದ ಕಾಗದ ಕಾರ್ಖಾನೆಯ ಡಿಲಕ್ಸ್ ಮೈದಾನದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಆಳ್ವಾಸ್ ನುಡಿಸಿರಿ ಘಟಕದ ಸಮನ್ವಯಾಧಿಕಾರಿ ನಾಗರಾಜ ಶೆಟ್ಟಿಯವರು ಹೇಳಿದರು.
ಅವರು ನಗರದ ಸಂತೋಷ್ ಹೊಟೆಲ್ ಸಭಾಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ, ಆಳ್ವಾಸ್ ಶಿಕ್ಷಣ ಸಂಸ್ಥೆ ರಾಜ್ಯ, ಹೊರ ರಾಜ್ಯ, ದೇಶ-ವಿದೇಶಗಳ ಒಟ್ಟು 26 ಸಾವಿರ ವಿದ್ಯಾರ್ಥಿಗಳನ್ನು ಹೊಂದಿದ ಒಂದು ವಿದ್ಯಾ ಸಂಸ್ಥೆ. ಸಂಸ್ಥೆಯ ಅಧ್ಯಕ್ಷರಾದ ಡಾ: ಎಂ. ಮೋಹನ ಆಳ್ವಾ ಅವರ ಚಿಂತನೆಯ ಫಲವಾಗಿ ಹುಟ್ಟಿಕೊಂಡ ವಿಶಿಷ್ಟ ಸಾಂಸ್ಕೃತಿಕ ವೇದಿಕೆಯೆ ಆಳ್ವಾಸ್ ನುಡಿಸಿರಿ ಘಟಕ. ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯ, ಹೊರ ರಾಜ್ಯ ಹಾಗೂ ದೇಶ-ವಿದೇಶಗಳ ವಿದ್ಯಾರ್ಥಿಗಳಿರುವುದರಿಂದ ಅವರವರ ಊರಿನ, ಅವರವರ ದೇಶದ, ರಾಜ್ಯದ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮತ್ತು ಜನಪದ ಪ್ರಕಾರಗಳನ್ನು ಸಂರಕ್ಷಿಸಿ ಬೆಳೆಸಬೇಕೆಂಬ ಮಹೋನ್ನತ ಉದ್ದೇಶದಿಂದ ಆಳ್ವಾಸ್ ನುಡಿಸಿರಿ ಘಟಕದ ಉದಯವಾಗಿದೆ ಎಂದು ನಾಗರಾಜ ಶೆಟ್ಟಿ ವಿವರಿಸಿದರು.
ಒಟ್ಟು 350 ವಿದ್ಯಾರ್ಥಿಗಳನ್ನೊಳಗೊಂಡ ತಂಡ ದಾಂಡೇಲಿಗಾಗಮಿಸುತ್ತಿದ್ದು, 80*40 ವಿಸ್ತೀರ್ಣದ ಬೃಹತ್ ರಂಗ ಸಜ್ಜಿಕೆಯಲ್ಲಿ ಮನಮೋಹಕ ಸಾಂಸ್ಕೃತಿಕ ವೈಭವವನ್ನು ಉಣ ಬಡಿಸಲಿದ್ದೇವೆ. ಪ್ರಮುಖವಾಗಿ ಕೇರಳದ ಮೋಹಿನಿಯಾಟ್ಟಮ್-ಅಷ್ಟಲಕ್ಷ್ಮೀ ನೃತ್ಯ, ಬಡಗುತಿಟ್ಟು ಯಕ್ಷಗಾನ-ದಾಸ ದೀಪಾಂಜಲಿ, ಆಂದ್ರದ ಜನಪದ ಬಂಜಾರ ನೃತ್ಯ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಶಾಸ್ತ್ರೀಯ ನೃತ್ಯ ನವದುರ್ಗೆ, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ದೋಲ್ ಚಲಮ್, ಕಥಕ್ ನೃತ್ಯ-ನವರಂಗ, ಪಶ್ಚಿಮ ಬಂಗಾಳದ ಪುರುಲಿಯ ಸಿಂಹ ನೃತ್ಯ, ತೆಂಕುಯಕ್ಷ ಪ್ರಯೋಗ -ಅಗ್ರಪೂಜೆ ಹೀಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ.
50488617 793545564333175 2459148203237310464 n
ಸಾಂಸ್ಕೃತಿಕ ಕಾರ್ಯಕ್ರಮ ಆರಂಭವಾಗುವ ಮುನ್ನ ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ: ಎಂ.ಮೋಹನ ಆಳ್ವಾ ಅವರು ಹತ್ತನೆ ತರಗತಿ ವಿದ್ಯಾರ್ಥಿಗಳು, ಪಾಲಕರು, ಮಾದ್ಯಮ ಮಿತ್ರರು ಹಾಗೂ ಆಯ್ಕ ನಾಗರೀಕರ ಜೊತೆ ಸಂವಾದ ಕಾರ್ಯಕ್ರಮವನ್ನು ನಡೆಸಲಿದ್ದಾರೆ.
ಸಾರ್ವಜನಿಕರಿಗೆ, ಕಲಾಭಿಮಾನಿಗಳಿಗೆ ಉಚಿತ ಪ್ರವೇಶವಿದ್ದು, ನಿಗದಿತ ಸಮಯದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ನಮ್ಮ ತಂಡಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿ, ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಶ್ರೀ.ವಿ.ಆರ್.ಡಿ.ಎಂ ಟ್ರಸ್ಟ್ ಯಶಸ್ವಿಯಾಗಿ ಹಮ್ಮಿಕೊಳ್ಳುತ್ತಿದೆ. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಾಗರಾಜ ಶೆಟ್ಟಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ.ವಿ.ಆರ್.ಡಿ.ಎಂ ಟ್ರಸ್ಟಿನ ಅಧಿಕಾರಿಗಳಾದ ವಿಕ್ರಂ ಲೋಕಾಂಡೆ, ಗಣೇಶ ಭಟ್ ಉಪಸ್ಥಿತರಿದ್ದರು.
ಮಾಹಿತಿ :-  ಸಂದೇಶ್.ಎಸ್.ಜೈನ್
49318374 793545460999852 8020532635627421696 n

 

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: .ಆರ್.ಡಿ.ಎಂ ಟ್ರಸ್ಟ್ ಆಶ್ರಯ, Alvas Cultural glory in Dandeli, Alvas educational institution state, ARDM Trust Raya, classical dance Navdur, Factory Deluxe Ground, Garba and dandiya in Gujarati, Kathak dance-navaranga, Mallakamba and rope exercise, Manipuri dol Chalam, Manipuri stick dance, on 18th, Purulia lion dance in West Bengal, Sri Lankan candyan dance, VRDM Trust Shelter, ಆಳ್ವಾಸ್ ಶಿಕ್ಷಣ ಸಂಸ್ಥೆ ರಾಜ್ಯ, ಕಥಕ್ ನೃತ್ಯ-ನವರಂಗ, ಕಾರ್ಖಾನೆಯ ಡಿಲಕ್ಸ್ ಮೈದಾನ, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಜ:18 ರಂದು, ದಾಂಡೇಲಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ, ದೇಶ-ವಿದೇಶಗಳ, ಪಶ್ಚಿಮ ಬಂಗಾಳದ ಪುರುಲಿಯ ಸಿಂಹ ನೃತ್ಯ, ಮಣಿಪುರಿ ದೋಲ್ ಚಲಮ್, ಮಣಿಪುರಿ ಸ್ಟಿಕ್ ಡ್ಯಾನ್ಸ್, ಮಲ್ಲಕಂಬ ಮತ್ತು ರೋಪ್ ಕಸರತ್ತು, ವಿ.ಆರ್.ಡಿ.ಎಂ ಟ್ರಸ್ಟ್ ಆಶ್ರಯ, ಶಾಸ್ತ್ರೀಯ ನೃತ್ಯ ನವದುರ್ಗೆ, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಹೊರ ರಾಜ್ಯ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...