ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಡೆದಾಡುವ ದೆವರೆಂದೆ ಖ್ಯಾತರಾಗಿದ್ದ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ(111) ಸೋಮವಾರ ಲಿಂಗೈಕ್ಯರಾಗಿದ್ದಾರೆ.
ನಡೆದಾಡುವ ದೇವರು ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಇಡಿ ಕರ್ನಾಟಕದಲ್ಲೆ ದುಃಖದ ವಾತಾವರಣ ಮನೆ ಮಾಡಿದೆ.
ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ.
ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
Leave a Comment