• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯುವಜನಸಮುದಾಯ ಪ್ರಜ್ಞಾವಂತರಾಗಬೇಕಾಗಿದೆ;ಎಂ.ವಿ.ಚೆನ್ನಕೇಶವ ರೆಡ್ಡಿ

January 25, 2019 by Gaju Gokarna Leave a Comment

watermarked DSC 0059 copy

ಹೊನ್ನಾವರ: ಭಾರತ ಸರಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ತಾಲೂಕಾ ಆಡಳಿತ ಹೊನ್ನಾವರ ಮತ್ತು ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ‘ಮತದಾರರ ಸಾಕ್ಷರತಾ ಸಂಘ’ದ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನೆರವೇರಿಸಲಾಯಿತು. ಮಾನ್ಯ ಹಿರಿಯ ಸಿವಿಲ್ ನ್ಯಾಯಾದೀಶರಾದ ಎಂ.ವಿ.ಚೆನ್ನಕೇಶವ ರೆಡ್ಡಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿನಂತರ ಮಾತನಾಡಿ ಭಾರತದ ಪ್ರಜಾಪ್ರಭುತ್ವದ ಉಳಿವಿಗೆ ಯುವಜನಸಮುದಾಯ ಪ್ರಜ್ಞಾವಂತರಾಗಬೇಕಾದ ಅಗತ್ಯತೆಯಿದೆ ಗೌರವ ಉಪಸ್ಥಿತಿಯನ್ನು ಹೊಂದಿದ ಮಾನ್ಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತದಾನವನ್ನು ಯಾವ ಆಸೆ ಆಮಿಶಗಳಿಗೆ ಬಲಿಯಾಗದೇ ಪ್ರಾಮಾಣ ಕವಾಗಿ ಚಲಾಯಿಸಿದಾಗ ಒಳ್ಳೆಯ ಸರಕಾರ ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವ ಉಳಿಯುತ್ತದೆಯೆಂದು ಸಭೆಗೆ ತಿಳಿಸಿದರು.
ಡಾ ಎಂ. ಆರ್. ನಾಯಕ ಪ್ರಾಧ್ಯಾಪಕರು, ಮಾತನಾಡಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಆಶಯವನ್ನು ಅರ್ಥಮಾಡಿಕೊಂಡು ಯುವಜನಸಮುದಾಯ ಪ್ರಜ್ಞಾವಂತರಾಗಿ ದೇಶಪ್ರೇಮದ ಭಾವನೆಯನ್ನು ಬೆಳೆಸಿಕೊಂಡು ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ದೇಶವನ್ನು ಬ್ರಿಟೀಷ್ ಸಾಮ್ರಾಜ್ಯಶಾಹಿ ದಾಸತ್ವದಿಂದ ಬಂಧ ವಿಮೋಚನೆಗೊಳಿಸುವಲ್ಲಿ ಪ್ರಯತ್ನಿಸಿ ಹುತಾತ್ಮರಾದ ಮಹಾಪುರುಷರ ತ್ಯಾಗದ ಸಮಾದಿಯ ಮೇಲೆ ಪ್ರೀತಿ ವಿಶ್ವಾಸ ಮತ್ತು ಸಾಮರಸ್ಯದ ಪ್ರಗತಿಪರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಧೃಡಗೊಳಿಸುವಲ್ಲಿ ಯುವದೇಶವೆಂದೇ ಕರೆಯಲ್ಪಡುವ ಭಾರತ ದೇಶದ ಯುವ ಸಮುದಾಯ ಕಡ್ಡಾಯವಾಗಿ ಮತ್ತು ಪ್ರಾಮಾಣ ಕವಾಗಿ ಮತದಾನ ಮಾಡಿ ಎಂದು ತಮ್ಮ ವಿಶೇಷ ಉಪನ್ಯಾಸದ ಮೂಲಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಯುವಕರಿಗೆ ದೇಶಪ್ರೇಮದ ಕುರಿತಾದ ಪ್ರೇರಣೆಯನ್ನು ನೀಡಿದರು.
ವೇದಿಕೆಯ ಮೇಲೆ ಉಪಸ್ಥಿತರಿದ್ದ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ವಿಜಯಲಕ್ಷ್ಮಿ ನಾಯ್ಕ ಮಾತನಾಡಿ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾದದ್ದಾಗಿದ್ದು, ಪ್ರತಿಯೊಬ್ಬ ಪ್ರಜೆಯೂ ತಮ್ಮ ತಮ್ಮ ಪ್ರಾಮಾಣ ಕ ಕರ್ತವ್ಯವನ್ನು ನಿರ್ವಹಿಸಬೇಕಾದ ಅಗತ್ಯತೆಯಿದೆಯೆಂದು ತಿಳಿಸಿದರು.
ಕೆ. ವಿ. ನಾಯ್ಕ ಅಧ್ಯಕ್ಷರು, ವಕೀಲ ಸಂಘ ಹೊನ್ನಾವರ, ಸೂರಜ್ ನಾಯ್ಕ, ಕಾರ್ಯದರ್ಶಿಗಳು, ವಕೀಲರ ಸಂಘ, ಬದರಿನಾಥ ನಾಯರಿ ಕೆ. ಸಹಾಯಕ ಸರಕಾರಿ ಅಭಿಯೋಜಕರು, ತಾಲೂಕಾ ಧಂಡಾಧಿಕಾರಿಗಳಾದ ವಿ. ಆರ್. ಗೌಡ ಅಧ್ಯಕ್ಷತೆ ವಹಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕುಮಾರಿ ಸಂಗೀತಾ ನಾಯ್ಕÀ ಸುಶ್ರಾವ್ಯವಾದ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಪ್ರೊ. ಜಿ.ಎಸ್.ಹೆಗಡೆ, ಎನ್.ಎಸ್.ಎಸ್. ಅಧಿಕಾರಿಗಳು ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು. ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಸುದೀಶ ನಾಯ್ಕ ಸರ್ವರನ್ನೂ ಸ್ವಾಗತಿಸಿದರು. ಪ್ರೊ. ನಾಗರಾಜ ಹೆಗಡೆ ಅಪಗಾಲ ಮತ್ತು ಪ್ರೊ. ಪ್ರಶಾಂತ ಹೆಗಡೆ ಕಾರ್ಯಕ್ರಮವನ್ನು ಸಮರ್ಥವಾಗಿ ನಿರ್ವಹಿಸಿದರು. ಒಟ್ಟಾರೆಯಾಗಿ ಮತದಾರರ ದಿನಾಚರಣೆಯ ಈ ಕಾರ್ಯಕ್ರಮವು ಯುವಜನರಲ್ಲಿ ಜಾಗ್ರತಿಯನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು. ಪಟ್ಟಣ ಪಂಚಾಯತದಿಂದ ಪ್ರಾರಂಭವಾದ ಮತದಾರ ದಿನಾಚರಣೆಯ ಅಂಗವಾಗಿ ನಡೆದ ಜಾಥಾವು ಎಸ್.ಡಿ.ಎಂ. ಮಹಾವಿದ್ಯಾಲಯದಲ್ಲಿ ಕೊನೆಗೊಂಡಿತು. ತಾಲೂಕಿನ ಹಲವು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಈ ಜಾಥಾದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

watermarked DSC 0037 copy

watermarked DSC 0023 copy

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News Tagged With: As directed, Communist Party of India, Consciousness in collaboration, Democracy Survival, Government of India, Government of India Election Commission, Independence Day, MV Chennakesava Reddy, National Voters, National Voters Day, Patriotic Emotion, State of British Empire, youth

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...