• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬರ ಪರಿಸ್ಥಿತಿ ನಿರ್ವಹಣೆ: ಹೆಚ್ಚಿನ ಹಣ ಬಿಡುಗಡೆಗೆ ದೇಶಪಾಂಡೆ ಆಗ್ರಹ

January 29, 2019 by Yogaraj SK Leave a Comment

download

ಬೆಂಗಳೂರು/ಬೆಳಗಾವಿ, ಜನವರಿ 29, 2019 – ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರಕಾರವು ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿರುವುದಕ್ಕೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿನ ಬರಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿರುವ ಸಚಿವರು, ಈ ಬಗ್ಗೆ ಅಲ್ಲಿಂದಲೇ ಪ್ರತಿಕ್ರಿಯಿಸಿದ್ದು “ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಅಲ್ಲದೆ, ವಾಸ್ತವವಾಗಿ 16,600 ಕೋಟಿ ರೂ.ಗಳಿಗಿಂತಲೂ ಹೆಚ್ಚು ನಷ್ಟವಾಗಿದೆ. ಅದರಂತೆ, ಕೇಂದ್ರದ ಮಾನದಂಡಗಳ ಪ್ರಕಾರವೇ ರಾಜ್ಯ ಸರಕಾರವು 2,434 ಕೋಟಿ ರೂ. ಪರಿಹಾರ ನೀಡುವಂತೆ 2018ರ ಅಕ್ಟೋಬರ್ 29ರಂದು ಮನವಿ ಸಲ್ಲಿಸಿತ್ತು. ಆದರೆ ಈಗ ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಕೊಟ್ಟಿರುವುದು ಸಮಾಧಾನ ತಂದಿಲ್ಲ,’’ ಎಂದಿದ್ದಾರೆ.

“ರಾಜ್ಯವು ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿದ್ದು, ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಇನ್ನೊಂದೆಡೆ, ರಾಜ್ಯದಲ್ಲಿ ಹಿಂಗಾರು ಮಳೆಯೂ ಕೈಕೊಟ್ಟಿದ್ದು ಈ ಅವಧಿಗೆ ಅನ್ವಯವಾಗುವಂತೆ 156 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಆದ್ದರಿಂದ ಕೇಂದ್ರ ಸರಕಾರವು ರಾಜ್ಯಕ್ಕೆ ಇನ್ನೂ ಹೆಚ್ಚಿನ ನೆರವು ನೀಡಬೇಕು,’’ ಎಂದು ದೇಶಪಾಂಡೆ ಆಗ್ರಹಿಸಿದ್ದಾರೆ.

  “ರಾಜ್ಯದ ಅನೇಕ ಭಾಗಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ತಲೆದೋರಿದ್ದು, ಜನರು ಗುಳೆ ಹೋಗದಂತೆ ತಡೆಯಲು ಉದ್ಯೋಗಸೃಷ್ಟಿ ಮಾಡಬೇಕಾದ ಜರೂರೂ ಎದುರಾಗಿದೆ. ಅಲ್ಲದೇ, ರಾಜ್ಯದ ಜನ ತೀವ್ರ ಬರಗಾಲದಿಂದ ಕಂಗೆಟ್ಟಿದ್ದಾರೆ. ಇದನ್ನು ಎದುರಿಸಲು ರಾಜ್ಯ ಸರಕಾರ ಸಮರೋಪಾದಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಆದರೆ, ಭೀಕರ ಬರಗಾಲವನ್ನು ಎದುರಿಸಲು ಕೇಂದ್ರದ ನೆರವು ಕೂಡ ಅಗತ್ಯ ಪ್ರಮಾಣದಲ್ಲಿ ಬೇಕಾಗಿದೆ,’’ ಎಂದು ಕಂದಾಯ ಸಚಿವರು ಹೇಳಿದ್ದಾರೆ.

ಬರ ಪರಿಸ್ಥಿತಿಯನ್ನು ನಿಭಾಯಿಸಲು ತ್ವರಿತವಾಗಿ ಹಣ ಬಿಡುಗಡೆ ಮಾಡುವಂತೆ ಕೋರಿ ದೇಶಪಾಂಡೆಯವರು ಈ ತಿಂಗಳ 10ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ಅಲ್ಲದೆ, ಹಿಂಗಾರು ಹಂಗಾಮಿನಲ್ಲಿ ತಲೆದೋರಿದ ಭೀಕರ ಬರಗಾಲದಿಂದಾದ ನಷ್ಟವನ್ನು ಅಂದಾಜಿಸಿ ಕೇಂದ್ರಕ್ಕೆ ಸಲ್ಲಿಸಲು ಮೆಮೊರಾಂಡಮ್ ಸಿದ್ಧಪಡಿಸುತ್ತಿದ್ದು, ಸದ್ಯದಲ್ಲೇ ಕೇಂದ್ರಕ್ಕೆ ವಿವರವಾದ ವರದಿ ಸಲ್ಲಿಸಲಾಗುವುದೆಂದೂ ಸಚಿವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: 600 crore, Deshpande demand for more money, drinking water, Drought, drought situation in the state, drought situation management, fodder problems, job losses, losses more than Rs 16, monsoon season of the year, state drought

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...