ಹೊನ್ನಾವರ .ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು, ವಿಜ್ಞಾನ ತಂತ್ರಜ್ಞಾನ ಇಲಾಖೆ, ಮತ್ತು ಸಾ.ಶಿ.ಇಲಾಖೆ ಇವರ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಫರ್ಧೆಯಲ್ಲಿ ಹೊನ್ನಾವರದ ನ್ಯೂ ಇಂಗ್ಲೀಷ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕೆ.ಎಲ್.ಗೀರೀಶ ಹಾಗೂ ಸಾಧನಾ ಇವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕಿಯರಾದ ಕಮಲಾ ನಾಯ್ಕ. ಆಡಳಿತ ಮಂಡಳಿಯ ಅಧ್ಯಕ್ಷರಾದ ಜಿ.ಟಿ.ಪೈ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿ ಯವರು ಅಭಿನಂದನೆ ಸಲ್ಲಿಸಿರುತ್ತಾರೆ.
Leave a Comment