• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ‌ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ

March 1, 2019 by Yogaraj SK Leave a Comment

download

ಹಳಿಯಾಳ:- ಅರಣ್ಯ ಹಕ್ಕು ಕಾಯ್ದೆ 2006ರನ್ವಯ ವಿಚಾರಣೆಯಾಗುತ್ತಿರುವ ರಿಟ್ ಪಿಟಿಷನ್ ಪ್ರಕರಣಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 13 ರಂದು ಹೊರಡಿಸಿರುವ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ರೀಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ಸದರಿ ಆದೇಶದಲ್ಲಿ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ದಿ.27.07.2019ರ ಗಡುವು ನಿಗದಿಪಡಿಸಿ ಅರಣ್ಯ ಭೂಮಿಗಳಲ್ಲಿ ತಮ್ಮ ಹಕ್ಕನ್ನು ಸಾಬೀತುಪಡಿಸಲು ವಿಫಲರಾದಂತಹ ಅರ್ಜಿದಾರನ್ನು ಸದರಿ ಅರಣ್ಯ ಭೂಮಿಗಳಿಂದ ತೆರವುಗೊಳಿಸಲು ನಿರ್ದೇಶನ ನೀಡಿದ್ದು, ಸದರಿ ನಿರ್ದೇಶನದ ಅನುಪಾಲನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.
ಅರಣ್ಯ ಪ್ರದೇಶಗಳಲ್ಲಿ ವಾಸವಿದ್ದ ಅರ್ಹ ಅರ್ಜಿದಾರರ ಬಹಳಷ್ಟು ಅರ್ಜಿಗಳನ್ನು ಸಹಜ ನ್ಯಾಯದಡಿಯಲ್ಲಿ ಅಹವಾಲು ಸಲ್ಲಿಸುವ ಅವಕಾಶ ನೀಡದೇ ವಿವಿಧ ಹಂತಗಳಲ್ಲಿ ತಿರಸ್ಕರಿಸಿರುವುದಾಗಿ ತಿಳಿದು ಬಂದ ಕೂಡಲೇ ತಮ್ಮ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಸಚಿವರು ಮತ್ತು ಅರಣ್ಯ ಸಚಿವರ ಉಪಸ್ಥಿತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.
ಈ ರೀತಿ ತಿರಸ್ಕøತಗೊಂಡ ಅರ್ಜಿಗಳ ಬಗ್ಗೆ ಸೂಕ್ತ ಕ್ರಮ ವಹಿಸಿ ಅರ್ಹ ಅರ್ಜಿದಾರರಿಗೆ ನ್ಯಾಯಯೋಚಿತವಾದ ಅವಕಾಶವನ್ನು ಕಲ್ಪಿಸಲು ಅನುವಾಗುವಂತೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಉಸ್ತುವಾರಿ ಸಮಿತಿಯ ಸಭೆಯನ್ನು ನಡೆಸಲಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಮತ್ತು ಇತರೇ ರಾಜ್ಯಗಳೂ ಸಹ ಸರ್ವೋಚ್ಛ ನ್ಯಾಯಾಲಯದ ಮೇಲ್ಕಂಡ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ರೀಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದಲೂ ಸಹ ರಿಕಾಲ್ ಪಿಟಿಷನ್ ಅನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿರುವ ದೇಶಪಾಂಡೆ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಇತರೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Haliyal News, Canara News Tagged With: 2006, araṇya bhūmigaḷinda teravu, araṇya hakku kāyde 2006ranvaya vicāraṇe, bhūmigaḷalli tam'ma hakka, his right to the land, inquiry by the Forest Rights Act, interim order, kandāya saciva ār vi dēśapāṇḍe, krama‌ kaigoḷḷalāguttide, madhyantara ādēśa, registering the recall petition, Revenue Minister RV Deshpande, rikāl piṭiṣan dākhalisalu, sarvōcca n'yāyālaya, Supreme Court, taking action, The petitioner has filed a petition against the petitioner, Viphalarādantaha arjidārannu sadari, who was discharged from the forest land, ಅರಣ್ಯ ಭೂಮಿಗಳಿಂದ ತೆರವು, ಅರಣ್ಯ ಹಕ್ಕು ಕಾಯ್ದೆ 2006ರನ್ವಯ ವಿಚಾರಣೆ, ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕ್ರಮ‌ ಕೈಗೊಳ್ಳಲಾಗುತ್ತಿದೆ, ಭೂಮಿಗಳಲ್ಲಿ ತಮ್ಮ ಹಕ್ಕ, ಮಧ್ಯಂತರ ಆದೇಶ, ರಿಕಾಲ್ ಪಿಟಿಷನ್ ದಾಖಲಿಸಲು, ವಿಫಲರಾದಂತಹ ಅರ್ಜಿದಾರನ್ನು ಸದರಿ, ಸರ್ವೋಚ್ಚ ನ್ಯಾಯಾಲಯ

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...