ಸಾಗರ: ಸಾಗರ ಹೊರವಲಯದ ಬಳಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇದ್ದ ವಾಹನ ಅಪಘಾತಕ್ಕೀಡಾಗಿದ್ದು ಪ್ರಾಣಾಯಾಮ ದಿಂದ ಪಾರಾಗಿದ್ದಾರೆ. ಹರತಾಳು ಹಾಲಪ್ಪ ಅವರು ಕಾರಿನಿಂದ ಶಿವಮೊಗ್ಗಕ್ಕೆ ಬರುವಾಗ ಎದುರಿಗೆ ಅಡ್ಡ ಬಂದ ವ್ಯಕ್ತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣದಲ್ಲಿ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿ, ಚಿಕಿತ್ಸೆ ನೀಡಲಾಗುತ್ತಿದೆ.


Leave a Comment