
ಗೋವಾ (ಪಣಜಿ): – ಪ್ಯಾಂಕ್ರಿಯಾಟಿಕ್ ಕಾಯಿಲೆಗೆ ತುತ್ತಾಗಿ ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ (63) ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾಯಂಕಾಲ ನಿಧನರಾಗಿದ್ದಾರೆ.
ಗೋವಾದ ಪಣಜಿಯಲ್ಲಿರುವ ತಮ್ಮ ಮಗನ ನಿವಾಸದಲ್ಲಿ ಪರಿಕ್ಕರ್ ಸಂಜೆ ವಿಧಿವಶರಾಗಿದ್ದಾರೆ.
ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅವರು ಭಾನುವಾರ ಸಾಯಂಕಾಲ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
1955 ಡಿಸೆಂಬರ್ 13 ರಂದು ಜನಿಸಿದ ಪರಿಕ್ಕರ್ 1978 ರಲ್ಲಿ ಬಾಂಬೆ ಐಐಟಿಯಿಂದ ಪದವಿಯನ್ನು ಪಡೆದಿದ್ದರು.
ಯುವಕರಾಗಿದ್ದ ವೇಳೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಆರ್ ಎಸ್ )ನಲ್ಲಿ ಗುರುತಿಸಿಕೊಂಡಿದ್ದ ಅವರು ಆ ಬಳಿಕ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರದಲ್ಲಿ ಒಬ್ಬರಾಗಿ ಬೆಳೆದು ತಮ್ಮ ಕ್ಲಿನ್ ಇಮೇಜ್ ನಿಂದಲೇ ಹೆಸರು ಮಾಡಿದರು.
ರಾಜಕಾರಣದಲ್ಲಿ ಅತ್ಯಂತ ಪ್ರಭಲ ನಾಯಕರಾಗಿ ಬೆಳೆದು ಪ್ರಧಾನಿ ಮೋದಿಜಿಯವರ ಆಪ್ತರಾಗಿ ಗುರುತಿಸಿಕೊಂಡ ಪರಿಕ್ಕರ ಅವರು ಗೋವಾ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ ಸಲ್ಲಿಸಿದ ಸೇವೆ ಅನುಪಮವಾಗಿದೆ.
1994 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಗಿ ಆಯ್ಕೆ ಆಗಿದ್ದ ಅವರು, 2000 ಇಸವಿಯಿಂದ 2005 ಹಾಗೂ 2012 ರಿಂದ 2014ರ ವರೆಗೂ ಗೋವಾ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ಆ ಬಳಿಕ 2017 ಮಾರ್ಚ್ 14 ರಂದು ಮತ್ತೆ ಗೋವಾ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು.
2014 ಚುನಾವಣೆ ಬಳಿಕ ದೇಶದ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. 2017ರ ಮಾರ್ಚ್ ವರೆಗೂ ಸಚಿವರಾಗಿ ಮುಂದುವರೆದಿದ್ದರು, ಆದರೆ ಗೋವಾ ರಾಜ್ಯ ರಾಜಕೀಯದಲ್ಲಿ ನಡೆದ ಬದಲಾವಣೆಗಳಿಂದ ಮತ್ತೇ ಗೋವಾ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದರು.

Leave a Comment