ಧಾರವಾಡ: ನಗರದ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿ ನಾಲ್ಕಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಭಾರೀ ದುರ್ಘಟನೆ ಸಂಭವಿಸಿದೆ.
ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಇರುವ ರೇವಣಕರ ಮಾರುತಿ ಸುಜುಕಿ ಶೋರೂಮ್ ಕಟ್ಟಡದ ಪಕ್ಕದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡವೇ ಕುಸಿದು ಬಿದ್ದಿದೆ.
ಮಧ್ಯಾಹ್ನ ಏಕಾಏಕಿ ಈ ಕಟ್ಟಡ ಕುಸಿದು ಬಿದ್ದಿದ್ದು, ಸಾಕಷ್ಟು ಜನ ಕಟ್ಟಡದ ತಳಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬಂದಿದ್ದು ತಳಭಾಗದಲ್ಲಿ ಸಿಲುಕಿಕೊಂಡವರನ್ನು ರಕ್ಷಣೆ ಮಾಡುವ ಕಾರ್ಯ ಮಾಡುತ್ತಿದ್ದಾರೆ.



Leave a Comment