• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಚಿವ ಸಿಎಸ್ ಶಿವಳ್ಳಿ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಆರ್. ವಿ .ದೇಶಪಾಂಡೆ

March 23, 2019 by Yogaraj SK Leave a Comment

download

ಹಳಿಯಾಳ:- ಕರ್ನಾಟಕ ರಾಜ್ಯದ ಪೌರಾಡಳಿತ ಸಚಿವರಾಗಿದ್ದ ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿಯವರು ಶುಕ್ರವಾರ ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ನಿಧನ ಹೊಂದಿರುವ ಸುದ್ದಿ ತಿಳಿದು ತೀವ್ರ ಆಘಾತ ಹಾಗೂ ಅತೀವ ದು:ಖವಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ.

ಧೀಮಂತ ನಾಯಕ:-
ತಮ್ಮ ಶೋಕ ಸಂದೇಶದಲ್ಲಿ ಶಿವಳ್ಳಿಯವರು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಆಯ್ಕೆಯಾಗಿ, ರಾಜ್ಯದ ಪೌರಾಡಳಿತ ಸಚಿವರಾಗಿ, ರಾಜ್ಯ ಸರ್ಕಾರದ ಸಂಸದೀಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದು, ರಾಜ್ಯ ಕಂಡ ಅತ್ಯಂತ ಸರಳ, ಸಜ್ಜನ, ಸಮಾಜಮುಖಿ, ಬಡವರ ಪರ, ರೈತಪರ, ಜನಾನುರಾಗಿ ವ್ಯಕ್ತಿತ್ವ ಹೊಂದಿದ್ದ ಇವರು ಸಾಮಾನ್ಯ ಜನರ ಧೀಮಂತ ನಾಯಕರಾಗಿದ್ದರೆಂದು ಕೊಂಡಾಡಿದ್ದಾರೆ.

ಧಾರವಾಡದ ಕುಮಾರೇಶ್ವರ ನಗರದಲ್ಲಿ ದಿ.19ರಂದು ನಿರ್ಮಾಣ ಹಂತದಲ್ಲಿದ್ದ ಕಟ್ಟಡವು ಆಕಸ್ಮಿಕವಾಗಿ ಕುಸಿದ ಕಾರಣ ನಾನು ದುರ್ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶಿವಳ್ಳಿ ಅವರು ನನ್ನ ಜೊತೆ ಖುದ್ದು ಸ್ಥಳದಲ್ಲಿದ್ದರು. ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳ ಚಿಕಿತ್ಸೆಗೆ ನೆರವಾಗಿದ್ದಲ್ಲದೆ ಅಂದಿನಿಂದ ಈವರೆಗೆ ಕಟ್ಟಡ ತೆರವು ಮತ್ತು ರಕ್ಷಣಾ ಕಾರ್ಯಾಚರಣೆಯ ಮೇಲುಸ್ತುವಾರಿಯನ್ನು ಅತ್ಯಂತ ಕಾಳಜಿಯಿಂದ ಸಮರ್ಪಕವಾಗಿ ನಿರ್ವಹಿಸಿದ್ದರು.

ಶಿವಳ್ಳಿ ಸೇವೆ ನಾಡಿಗೆ ಅವಶ್ಯಕತೆ ಇತ್ತು :-
ಸದಾ ಬಡವರ, ಕೂಲಿ ಕಾರ್ಮಿಕರ ಹಾಗೂ ರೈತರ ಏಳಿಗೆಗಾಗಿ ಚಿಂತಿಸುತ್ತಿದ್ದ ಶಿವಳ್ಳಿ ಇತ್ತೀಚೆಗೆ ಪುನರ್ ರಚನೆಯಾದ ರಾಜ್ಯದ ಮಂತ್ರಿ ಮಂಡಲದಲ್ಲಿ ಸಚಿವರಾಗಿ ನೇಮಕಗೊಂಡ ಅತ್ಯಲ್ಪ ಕಾಲದಲ್ಲೇ ವಿಧಿವಶರಾಗಿರುವುದು ಅತ್ಯಂತ ದು:ಖಕರವಾಗಿದೆ ಎಂದಿರುವ ದೇಶಪಾಂಡೆ ಇನ್ನೂ ಶಿವಳ್ಳಿ ಅವರ ಸೇವೆ ಈ ನಾಡಿಗೆ ಮತ್ತು ದೇಶಕ್ಕೆ ಅತ್ಯಗತ್ಯವಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತುಂಬಲಾರದ ನಷ್ಠ :-
ಸಚಿವರ ಅಕಾಲಿಕ ಮರಣವು ರಾಜ್ಯ ರಾಜಕಾರಣ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಠವಾಗಿದ್ದು, ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃಧ್ಧಿಗೆ ತೀವ್ರ ಹಿನ್ನೆಡೆಯಾಗಿದೆ ಮತ್ತು ವೈಯಕ್ತಿಕವಾಗಿ ನನಗೆ ತುಂಬಾ ನೋವನ್ನುಂಟು ಮಾಡಿದೆ ಎಂದು ದುಃಖ ವ್ಯಕ್ತಪಡಿಸಿರುವ ದೇಶಪಾಂಡೆ ಮೃತರÀ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗ, ಸ್ನೇಹಿತರಿಗೆ ಈ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Haliyal News Tagged With: Chanabasappa Satyappa Shivalli, condolence for SHIVALI death, condolences, died of Minister CS Shivalli, ministerial or foreign affairs, Shivalli, Shivalli Kundagola assembly constituency in Dharwad district, The death toll is the state politics, the party which has not been filled with the party, the recently re-elected Minister of State, visited the hospitals and injured patients

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,155 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...