ಹೊನ್ನವರ : ತಾಲೂಕಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರನ್ನಾಗಿ, ಪಟ್ಟಣದ ಜೋಗಮಠ ನಿವಾಸಿ ಮಹಮದ್ ಝಕ್ರಿಯ್ಯಾ ಶೇಖ್ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಸಯ್ಯದ ಅಹ್ಮದ್ ಅವರ ಸೂಚನೆಯÀ ಮೇರೆಗೆ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಮಜೀದ್ ಶೇಖ್ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ತಿಳಿಸಿದ್ದಾರೆ.
ನಿನ್ನೆ ಶಿರಸಿಯ ಜಿಲ್ಲಾ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆದ ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ವಿಭಾಗದ ಸಭೆಯಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಅಧಿಕಾರ ಪತ್ರ ವಿತರಿಸಿ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸ್ವೀಕರಿಸಿ ಹೊನ್ನಾವರ ಬ್ಲಾಕ್ ವ್ಯಾಪ್ತಿಯಲ್ಲಿ ಪಕ್ಷವನ್ನು ಸಂಘಟಿಸಲು ಕಾರ್ಯಪ್ರವರ್ತರಾಗುವಂತೆ ವಿನಂತಿಸಿದ್ದಾರೆ. ನೂತನ ಹೊನ್ನಾವರ ತಾಲೂಕಾ ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಹಮದ್ ಜಿಕ್ರಿಯ್ಯಾ ಶೇಖ್ ಇವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಅಭಿನಂದಿಸಿದ್ದಾರೆ.
Leave a Comment