• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚುನಾವಣಾ ಅಧಿಕಾರಿಗಳಿಂದ ಮತ ಯಂತ್ರ ಭದ್ರತಾ ಕೊಠಡಿ ಪರಿಶೀಲನೆ

April 1, 2019 by Yogaraj SK Leave a Comment

MATA YANTRA bhadrata kothadi parishilane

ಹಳಿಯಾಳ : ವಿದ್ಯುನ್ಮಾನ ಮತಯಂತ್ರಗಳ ಸಮೇತ ಇನ್ನಿತರ ಪರಿಕರಗಳು, ಸಿಬ್ಬಂದಿಗೆ ತರಬೇತಿ ಸೇರಿದಂತೆ ಲೋಕಸಭಾ ಚುನಾವಣೆಗೆ ಸಿದ್ದತೆಗಳು ಭರದಿಂದ ಸಾಗಿದೆ. ಜಿಲ್ಲಾ ಕೇಂದ್ರದಿಂದ ಮತಯಂತ್ರಗಳನ್ನು ತಂದು ತಾಲೂಕಿನ ಹವಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡದಲ್ಲಿ ನಿರ್ಮಿಸಲಾದ ಭದ್ರತಾ ಕೊಠಡಿಗಳಲ್ಲಿ ಇರಿಸಲಾಗಿದ್ದು ಅದಕ್ಕೆ ಸೂಕ್ತವಾದ ಪೋಲಿಸ್ ಭದ್ರತೆಯನ್ನು ನೀಡಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಪುಟ್ಟಸ್ವಾಮಿ ತಿಳಿಸಿದರು.
ಭದ್ರತಾಕೋಠಡಿ ಇರುವ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕಾಲೇಜಿನ ನಾಲ್ಕು ಕೊಠಡಿಗಳನ್ನು ಮತಯಂತ್ರಗಳನ್ನು ಸುರಕ್ಷಿತವಾಗಿ ಇಡಲು ಕಳೆದ ಒಂದು ವಾರದ ಹಿಂದೆಯೇ ಪಡೆದು ಲೋಕೋಪಯೋಗಿ ಇಲಾಖೆ, ಪೋಲಿಸ್, ಹೆಸ್ಕಾಂ, ಕಂದಾಯ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಅದಕ್ಕೆ ಬೇಕಾದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಲಾಗಿದೆ. ಕಾರವಾರದಿಂದ 217 ಮತಗಟ್ಟೆಗಳಿಗೆ ಬೇಕಾಗುವ ಎಲ್ಲಾ ಯಂತ್ರಗಳ ಸಮೇತ ಹೆಚ್ಚುವರಿ ಯಂತ್ರಗಳನ್ನು ಬೀಗಿ ಪೋಲಿಸ್ ಭದ್ರತೆಯೊಂದಿಗೆ ತಂದು ಕೊಠಡಿಗಳಲ್ಲಿ ಸಂಗ್ರಹಿಸಲಾಗಿದೆ. ಭದ್ರತೆಯ ದೃಷ್ಠಿಯಿಂದ ಭದ್ರತಾ ಕೊಠಡಿಗಳ ಸುತ್ತಮುತ್ತಲು 9 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ ಬೆಳಕಿನ ವ್ಯವಸ್ಥೆಯನ್ನು ಸಹ ಮಾಡಲಾಗಿದ್ದು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚಗೊಳಿಸಲಾಗಿದೆ ಎಂದರು.
2 ಭದ್ರತಾ ಕೊಠಡಿಗಳನ್ನು ನಿರ್ಮಿಸಲಾಗಿದ್ದು ಇದರ ಜೊತೆಗೆ ಭದ್ರತೆಗಾಗಿ ನಿಯೋಜನೆಗೊಂಡಿರುವ ಪೋಲಿಸರಿಗಾಗಿ ಅದರ ಪಕ್ಕದಲ್ಲಿಯೇ ಇನ್ನೊಂದು ಕೊಠಡಿಯನ್ನು ನೀಡಲಾಗಿದೆ. ದಿನದ 24 ಗಂಟೆಯು ಭದ್ರತೆಗಾಗಿ ಡಿವೈಎಸ್ಪಿ ಮೋಹನಪ್ರಸಾದ, ಸಿಪಿಐ ಮತ್ತು ಪಿಎಸೈ ಅವರ ನೇತೃತ್ವದಲ್ಲಿ ಪ್ರತಿದಿನ ತಪಾಸಣೆ ನಡೆಯಲಿದೆ. ಅಲ್ಲದೇ ಎಎಸೈ, ಓರ್ವ ಹೆಡ್ ಕಾನಸ್ಟೇಬಲ್ ಮತ್ತು ನಾಲ್ವರು ಶಸ್ತ್ರಸಜ್ಜಿತ ಪೋಲಿಸರು ಸೇರಿದಂತೆ ಕಾಯ್ದಿಟ್ಟ ಪೋಲಿಸ್ ಪಡೆ ಕಾವಲು ಕಾಯಲಿದ್ದಾರೆ. ಪ್ರತಿ ದಿನ ಪೋಲಿಸ ಹಿರಿಯ ಅಧಿಕಾರಿಗಳು ಸೇರಿದಂತೆ ಚುನಾವಣಾ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಭದ್ರತಾ ಕೊಠಡಿಗಳನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಸೀಲ್ ಮಾಡಲಾಗಿದ್ದು, ಅಭ್ಯರ್ಥಿಗಳ ಘೋಷಣೆಯ ನಂತರ ಬೆಂಗಳೂರಿನಿಂದ ಆಗಮಿಸುವ ಇಂಜನಿಯರ್‍ಗಳ ತಂಡವು ಮತಯಂತ್ರಗಳಲ್ಲಿ ಅಭ್ಯರ್ಥಿಗಳ ವಿವರ ಹಾಕಲಿದೆ ಎಂದರು.
ಈ ಸಂದರ್ಭದಲ್ಲಿ ಹಳಿಯಾಳ ತಹಶೀಲದಾರ ಶಿವಾನಂದ ಉಳ್ಳೇಗಡ್ಡಿ, ದಾಂಡೇಲಿಯ ಚಾಮರಾಜ್ ಪಾಟೀಲ್.ಸಿಪಿಐ ಬಿ.ಎಸ್.ಲೋಕಾಪೂರ, ಗ್ರೇಡ್ 2 ತಹಶೀಲದಾರ ಜಿ.ಕೆ.ರತ್ನಾಕರ, ಪಿಎಸೈ ಆನಂದಮೂರ್ತಿ ಸಿ, ಚುನಾವಣಾ ಶಿರಸ್ತೇದಾರ ಅನಂತ ಚಿಪ್ಪಲಕಟ್ಟಿ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News Tagged With: additional machinery, CPI and PAI, daily inspection, DySP Police, electoral officers, For 24 hours security, hecam, Police, police force, public service department, revenue department, security Room verification, security rooms, voting machine, voting machines safe and secure college, with electronic voting machines

Explore More:

About Yogaraj SK

Yograj typically covers local news from Haliyal

Subscribe to News from Yogaraj

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...