
ಕಾರವಾರ :- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅನಂತ್ ಕುಮಾರ್ ಹೆಗಡೆ ಮಂಗಳವಾರ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸಾವಿರಾರು ಕಾರ್ಯಕರೊಂದಿಗೆ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಮೆರವಣಿಗೆಯಲ್ಲಿ
ದೇಶಕ್ಕೆ_ಮೋದಿ
ಉತ್ತರ_ಕನ್ನಡಕ್ಕೆ_ಅನಂತಕುಮಾರ್ ಘೋಷಣೆಗಳು ಮೊಳಗಿದವು.
ನಾಮಪತ್ರ ಸಲ್ಲಿಸುವ ಮೋದಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು ಹೆಗಡೆ.
ಈ ಸಂದರ್ಭದಲ್ಲಿ ಸಂಸದರ ಧರ್ಮಪತ್ನಿ,
ವಿರೋಧ ಪಕ್ಷದ ನಾಯಕ ಜಗದೀಶ ಶೇಟ್ಟರ್,
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಎಸ್. ವಿ. ಸಂಕನೂರು, ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಚುನಾವಣಾ ಉಸ್ತುವಾರಿಯಾದ ಲಿಂಗರಾಜ ಪಾಟಿಲ್, ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಮಹಾಂತೇಶ ದೊಡ್ಡಗೌಡರ್, ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ನಾಯ್ಕ, ಮಾಜಿ ಶಾಸಕ ಸುನೀಲ್ ಹೆಗಡೆ , ಬಿಜೆಪಿ ಮುಖಂಡರುಗಳು ಇದ್ದರು.

Leave a Comment