
ಕಾರವಾರ :- ಅಪ್ರತಿಮ ದೇಶಪ್ರೇಮಿ ನರೇಂದ್ರ ಮೋದಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಡೆಯ ಜನತೆಗೆ ತಲುಪುತ್ತಿದೆ. ನಾವು ಸುಳ್ಳು ಹೇಳಿ ಮತ ಕೇಳುವ ಅವಶ್ಯಕತೆ ಇಲ್ಲ. ನಮ್ಮ ಸಾಧನೆಗಳನ್ನು ಜನತೆಯೇ ಒಪ್ಪಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೇ ಸ್ವಪ್ರೇರಣೆಯಿಂದ ಮೋದಿರವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ನಮ್ಮ ದೇಶದ ಅಭಿವೃದ್ಧಿ ಗೆ ಉಡುಗೊರೆಯಾಗಿ ನೀಡೋಣ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಕರೆ ನೀಡಿದರು.
ಮಂಗಳವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಉತ್ತರಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಅನಂತಕುಮಾರ ಹೆಗಡೆ – ನಂತರದಲ್ಲಿ ಕಾರವಾರದ ದೈವಜ್ಞ ಸಭಾಭವನದಲ್ಲಿ ಸಭೆ ನಡೆಸಲಾಯಿತು.
ನಮ್ಮ ಶಕ್ತಿ ಏನೆಂಬುದನ್ನು ಇಂದು ನಮ್ಮ ನೆಚ್ಚಿನ ಕಾರ್ಯಕರ್ತರು ತೋರಿಸಿಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಕೆಯಂದೇ ಸಾಗರೋಪಾದಿಯಲ್ಲಿ ಸೇರಿರುವ ಕಾರ್ಯಕರ್ತರು ನಮ್ಮ ಹುರುಪನ್ನು ಇಮ್ಮಡಿಗೊಳಿಸಿದ್ದಾರೆ ಎಂದರು. ಸತತ ಏಳನೆ ಬಾರಿಗೆ ನಮ್ಮ ಪಕ್ಷದ ವತಿಯಿಂದ ಅಭ್ಯರ್ಥಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಅನಂತಕುಮಾರ ಹೆಗಡೆ ರವರು ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ರೂಪಾಲಿ ನಾಯ್ಕ ಹೆಳಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿ ಶಾಸಕರಾದ ಜಗದೀಶ ಶೆಟ್ಟರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಎಸ್. ವಿ. ಸಂಕನೂರು, ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಚುನಾವಣಾ ಉಸ್ತುವಾರಿಯಾದ ಲಿಂಗರಾಜ ಪಾಟಿಲ್, ಕಿತ್ತೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಮಹಾಂತೇಶ ದೊಡ್ಡಗೌಡರ್, ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ದಿನಕರ ಶೆಟ್ಟಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ನಾಯ್ಕ, ಮಾಜಿ ಶಾಸಕ ಸುನೀಲ್ ಹೆಗಡೆ ಪಕ್ಷದ ಸಾವಿರಾರು ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು.
Leave a Comment