
ಕಾರವಾರ:- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಾರವಾರದಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮಾಲಾದೇವಿ ಮೈದಾನದಲ್ಲಿ ಬಹಿರಂಗ ಸಭೆ ನಡೆಸಲಾಯಿತು.
ಬಳಿಕ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿಗಳ ಬಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಶಾಸಕರಾದ ಅಂಜಲಿ ನಿಂಬಾಳ್ಕರ, ಶಿವರಾಮ ಹೆಬ್ಬಾರ, ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭಿಮಣ್ಣಾ ನಾಯ್ಕ, ಜೆಡಿಎಸ್ ನ ಬಿ.ಆರ್ ನಾಯ್ಕ ಮೊದಲಾದ ಮುಖಂಡರು ಇದ್ದರು.
Leave a Comment